ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹತ್ಯೆಗಳಿಗೆ ಪಿಎಫ್‌ಐ ಹೊಣೆ: ಕರಂದ್ಲಾಜೆ
ಗುರುವಾರ, 17 ಆಗಸ್ಟ್ 2017 (12:58 IST)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹತ್ಯೆಗಳಿಗೆ ಪಿಎಫ್‌ಐ ಹೊಣೆಯಾಗಿದೆ ಎಂದು ಉಡುಪಿ ಲೋಕಸಭೆ ಕ್ಷೇತ್ರದ ಸಂಸದ ಶೋಭಾ ಕರಂದ್ಲಾಜೆ ಎಂದು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶರತ್ ಮಡಿವಾಳ ಹತ್ಯೆಯಲ್ಲಿ ಪಿಎಫ್‌ಐ ಕೈವಾಡ ಸಾಬೀತಾಗಿದೆ ಈ ಹಿನ್ನೆಲೆಯಲ್ಲಿ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಜಿಲ್ಲೆಯಲ್ಲೂ ಲವ್ ಜಿಹಾದ್ ನಡೆದ ಬಗ್ಗೆಯೂ ವರದಿಗಳು ಕೇಳಿಬರುತ್ತಿವೆ. ಈ ಪ್ರಕರಣಗಳನ್ನು ಕೂಡಾ ಎನ್‌ಐಎ ಮೂಲಕ ತನಿಖೆ ನಡೆಸಬೇಕು ಎಂದು ಸರಕಾರಕ್ಕೆ ಆಗ್ರಹಿಸಿದ್ದಾರೆ.
ಕೇರಳದಲ್ಲಿ ನಡೆದ ಲವ್ ಜಿಹಾದ್ ಪ್ರಕರಣ ತನಿಖೆಯ ನಂತರ ಹೊಸ ತಿರುವು ಪಡೆದಿದ್ದರಿಂದ, ಸುಪ್ರೀಂಕೋರ್ಟ್ ಪ್ರಕರಣದ ತನಿಖೆ ನಡೆಸುವಂತೆ ಎನ್‌ಐಎ ಅಧಿಕಾರಿಗಳಿಗೆ ಆದೇಶ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.