ಸುಳ್ಯ PFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ ಎನ್ಐಎ
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ಭಯೋತ್ಪಾದಕ ಚಟುವಟಿಕೆಗೆ ಬಳಸಲಾಗುತ್ತಿದ್ದ ಸುಳ್ಯPFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗಾಂಧಿನಗರ ಅಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್ನ ಮೊದಲ ಮಹಡಿಯಲ್ಲಿದ್ದ ಕಚೇರಿಯನ್ನು ಜಪ್ತಿ ಮಾಡಲಾಗಿದ್ದು, ಈ ಬಗ್ಗೆ ಹಾಲ್ ಮಾಲೀಕರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗೆ ಆರ್ಡರ್ ಕಾಪಿ ರವಾನೆ ಮಾಡಲಾಗಿದೆ. ರಾಷ್ಟ್ರೀಯ ತನಿಖಾ ದಳದ ವಶದಲ್ಲಿರುವ ಸುಳ್ಯ ಪಿಎಫ್ಐ ಕಚೇರಿ ಇದ್ದ ಜಾಗವನ್ನು ಪರಾಬಾರೆ ಮಾಡುವಂತಿಲ್ಲ. ಬಾಡಿಗೆ, ಲೀಜ್ ಕೊಡುವಂತಿಲ್ಲ. ಅಲ್ಲಿರುವ ಯಾವುದೇ ಪ್ರಾಪರ್ಟಿ ಸಾಗಿಸುವುದು ಅಥವಾ ನವೀಕರಣ ಮಾಡುವುದು ನಿಷಿದ್ಧವಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಸಂಚನ್ನು ಇದೇ ಕಚೇರಿಯಲ್ಲಿ ಮಾಡಲಾಗಿತ್ತು ಎಂದು NIA ಅಧಿಕೃತ ಮೂಲದಿಂದ ಮಾಹಿತಿ ಲಭ್ಯವಾಗಿದೆ.