ಪಿಎಫ್‌ಐ ನಿಷೇಧಗೊಳಿಸಿದ ಕೇಂದ್ರ ಸರ್ಕಾರ ಪಿಎಫ್‌ಐ ನಅಧಿಕೃತ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈ ಖಾತೆಗಳಲ್ಲಿ ಕೋಟ್ಯಾಂತರ ರೂ ಹಣವಿದ್ದು, ಇದನ್ನು ಹೊರತುಪಡಿಸಿ ಕೋಟ್ಯಾಂತರ ರೂ ಹಣ ಸಂಘಟನೆ ಬಳಿಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆಲವು ಸಾಮಾನ್ಯ ಕಾರ್ಯಕರ್ತರ ಖಾತೆಯಲ್ಲಿ ಲಕ್ಷಾಂತರ ರೂ ಹಣ ಪತ್ತೆಯಾಗಿದೆ. ಇದು ದೇಶ, ವಿದೇಶಗಳಿಂದ ಬಂದಿರುವ ದೇಣಿಗೆ ಹಣವಾಗಿದ್ದು, ಯುಪಿಐ ಕೋಡ್, ಕ್ಯು ಆರ್ ಕೋಡ್ ಮೂಲಕ ಹಣವನ್ನು ಹಲವು ಬಾರಿ ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪಿಎಫ್‌ಐ ನಿಷೇಧ ಆದೇಶ ಹೊರಬಿದ್ದ ನಂತರ ಮಂಗಳೂರಿನ 12 ಪಿಎಫ್‌ಐ ಕಚೇರಿಗಳಿಗೆ ಬೀಗ ಹಾಕಲಾಗಿದೆ. .. ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಮಂಗಳೂರು, ಪಣಂಬೂರು, ಸುರತ್ಕಲ್, ಬಜ್ಪೆ, ಉಳ್ಳಾಲ, ಕೋಣಾಜೆ ಸೇರಿದಂತೆ ಹಲವು ಕಡೆ ತಡರಾತ್ರಿವರೆಗೂ ಪೊಲೀಸರು ಕಾರ್ಯಾಚರಣೆ ನಡೆಸಿದರು.
ಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಅದರ ಅಂಗಸಂಸ್ಥೆಗಳ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ ಐದು ವರ್ಷಗಳ ನಿಷೇಧದ ನಂತರ, ಗೃಹ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಮುಖ್ಯಸ್ಥರಿಗೆ ಸಂಘಟನೆಯ ಇತರ ಕಚೇರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮತ್ತು ಹಣವನ್ನು ವಶಪಡಿಸಿಕೊಳ್ಳಲು ಹೇಳಿದೆ.