ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ : ಈ ಕೆಲಸ ಆಗ್ಲೇಬೇಕು ಎಂದ ಕೈ ಮುಖಂಡರು
ಭಾನುವಾರ, 23 ಆಗಸ್ಟ್ 2020 (18:39 IST)
ರಾಜ್ಯ ರಾಜಕೀಯದಲ್ಲಿ ಫೋನ್ ಕದ್ದಾಲಿಕೆ ವಿಷಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.
ಈ ನಡುವೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಡಿ.ಕೆ.ಶಿಗೆ ಸಾಥ್ ನೀಡಿರುವ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಮುಖಂಡರ ಫೋನ್ ಕದ್ದಾಲಿಕೆ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆಗೆ ಒಳಪಡಿಸಬೇಕೆಂದು ಒತ್ತಾಯ ಮಾಡಿದ್ದಾರೆ.
ಗೃಹ ಸಚಿವರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ. ವಿನಾಕಾರಣ ಕಾಂಗ್ರೆಸ್ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.