ಪ್ಲಾಟ್‌ಫಾರಂ ಸ್ಕ್ರೀನ್ ಡೋರ್ ಅಳವಡಿಕೆಗೆ ಪ್ಲ್ಯಾನ್
ನಮ್ಮ ಮೆಟ್ರೋ ದಿನ ಕಳೆದಂತೆ ಹೆಚ್ಚೆಚ್ಚು ಜನಪ್ರಿಯತೆ ಗಳಿಸುತ್ತಿದೆ. ಈ ಬೆನ್ನಲ್ಲೇ ಪ್ರಯಾಣಿಕರ ಸಂಖ್ಯೆ ಕೂಡ ದುಪ್ಪಟ್ಟಾಗಿದೆ. ಹೀಗಿರುವಾಗಲೇ ನಮ್ಮ ಮೆಟ್ರೋ ಪ್ರಯಾಣಿಕರ ಸುರಕ್ಷತೆಗೆ ಭರ್ಜರಿ ಪ್ಲ್ಯಾನ್ ಮಾಡಿದೆ. ಇದೇ ಮೊದಲ ಬಾರಿಗೆ ಮೆಟ್ರೊ ನಿಲ್ದಾಣದಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್ ಡೋರ್ ಅಳವಡಿಕೆಗೆ ಮುಂದಾಗಿದೆ. ಇನ್ಫೋಸಿಸ್ ಫೌಂಡೇಶನ್ ಅನುದಾನದೊಂದಿಗೆ ನಿರ್ಮಾಣ ಮಾಡಲಾಗುತ್ತಿರುವ ಎಲೆಕ್ಟ್ರಾನಿಕ್ಸ್ ಸಿಟಿಯ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣದಲ್ಲಿ ಈ ವ್ಯವಸ್ಥೆ ಅಳವಡಿಸಲಾಗುತ್ತಿದೆ. ಈ ನಿಲ್ದಾಣ ಆರ್.ವಿ ರಸ್ತೆ – ಬೊಮ್ಮಸಂದ್ರ ಹಳದಿ ಮಾರ್ಗದ ಭಾಗವಾಗಿದ್ದು, ವರ್ಷಾಂತ್ಯದ ವೇಳೆಗೆ ಕಾರ್ಯಾರಂಭ ಮಾಡುವ ಸಾಧ್ಯತೆಯಿದೆ. ಇನ್ನು, ಬೆಂಗಳೂರಿನಲ್ಲಿ 63 ಮೆಟ್ರೋ ನಿಲ್ದಾಣಗಳಿವೆ. ನಮ್ಮ ಮೆಟ್ರೋ 70 ಕಿಲೋ ಮೀಟರ್‌ಗಳಷ್ಟು ಕಾರ್ಯಾಚರಣೆ ಜಾಲವನ್ನು ಹೊಂದಿದೆ. ಅವುಗಳಲ್ಲಿ ಯಾವುದೇ ಪಿಎಸ್‌ಡಿ ವ್ಯವಸ್ಥೆ ಇಲ್ಲ. ಹೀಗಾಗಿ 135 ಕೋಟಿ ರೂಪಾಯಿ ವೆಚ್ಚದಲ್ಲಿ ವಾಕ್‌ವೇ ನಿಲ್ದಾಣ ಇನ್ಫೋಸಿಸ್ ಕ್ಯಾಂಪಸ್‌ನೊಂದಿಗೆ ಸಂಪರ್ಕಿಸುತ್ತದೆ. ಜತೆಗೆ ವಾಣಿಜ್ಯ ಚಟುವಟಿಕೆಗಳಿಗಾಗಿ 3 ಸಾವಿರ ಚದರ ಅಡಿ ಜಾಗ ನೀಡಲಾಗಿದೆ.