ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆ ಮಾ.12 ರಂದು ಮಕ್ಕಂದೂರಿನಲ್ಲಿ ಚಾಲನೆ

ಶನಿವಾರ, 12 ಮಾರ್ಚ್ 2022 (20:32 IST)
ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಿಗೆ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲು 'ಕಂದಾಯ ದಾಖಲೆ ಮನೆ ಬಾಗಿಲಿಗೆ' ಯೋಜನೆ ಹಮ್ಮಿಕೊಂಡಿದ್ದು, ಮಾರ್ಚ್, 12 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿ ತಾಲೂಕಿನ ಮಕ್ಕಳಂದೂರಿನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. .ಬಿ.ಸಿ.ಸತೀಶ ಅವರು. 
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಮಾರ್ಚ್, 12 ರಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಮಟ್ಟದಲ್ಲಿ ಚಿಕ್ಕಬಳ್ಳಾಪುರದಲ್ಲಿ ಚಾಲನೆ ನೀಡಲಿದ್ದಾರೆ. ಆ ನಂತರ ಜಿಲ್ಲೆಯಲ್ಲಿಯೂ 'ಕಂದಾಯ ದಾಖಲೆ ಮನೆ ಬಾಗಿಲಿಗೆ' ಚಾಲನೆ ದೊರೆಯಲಿದೆ. ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.
ಕಂದಾಯ ಸಿಬ್ಬಂದಿಯಾದ ಗ್ರಾಮ ಸಹಾಯಕರು, ಗ್ರಾಮ ಲೆಕ್ಕಿಗರು, ರಾಜಸ್ವ ನಿರೀಕ್ಷಕರು, ಉಪ ತಹಶೀಲ್ದಾರ್, ತಹಶೀಲ್ದಾರರು, ಉಪ ವಿಭಾಗಾಧಿಕಾರಿಗಳು, ಅಪರ ಜಿಲ್ಲಾಧಿಕಾರಿ ಮತ್ತು ಅಗತ್ಯವಿದ್ದಲ್ಲಿ ಇತರ ಇಲಾಖೆಗಳ ಸಿಬ್ಬಂದಿ/ ಅಧಿಕಾರಿಗಳನ್ನು ಉಪಯೋಗಿಸಿಕೊಂಡು ಜಿಲ್ಲೆಯಲ್ಲಿರುವ ಎಲ್ಲಾ ರೈತ ಕುಟುಂಬಗಳಿಗೆ ಕಂದಾಯ ದಾಖಲೆಗಳನ್ನು ಮಾರ್ಚ್, 12 ರಂದು ತಲುಪಿಸಲು ಕ್ರಮವಹಿಸಲಾಗುತ್ತದೆ.
ಒಂದು ವೇಳೆ ದಾಖಲೆಗಳು ಮುದ್ರಣವಾಗದೇ ರೈತರಿಗೆ ದಾಖಲೆಗಳನ್ನು ಮುದ್ದಾಂ ತಲುಪಿಸಲು ಸಾಧ್ಯವಾಗದೇ ಇದ್ದಲ್ಲಿ ಅಂತಹ ರೈತರಿಗೆ ಒಂದು ವಾರ ಮಾರ್ಚ್, 21 ರಿಂದ ಮಾರ್ಚ್, 26 ರವರೆಗೆ ಅಟಲ್ಜೀ ಜನಸ್ನೇಹಿ ಕೇಂದ್ರದಲ್ಲಿ ಉಚಿತವಾಗಿ ದಾಖಲೆಗಳನ್ನು ವಿತರಿಸಲು ಕ್ರಮಕೈಗೊಳ್ಳಲಾಗುತ್ತದೆ ಎಂದು ಡಾ.ಬಿ.ಸಿ.ಸತೀಶ ಅವರು ವಿವರಿಸಿದರು. 
ಪೂರ್ವ ಸಿದ್ದತೆ: ಆರ್ಟಿಸಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಮುದ್ರಣ ಮಾಡಿ ಕುಟುಂಬವಾರು ಮತ್ತು ಗ್ರಾಮವಾರು ವಿಂಗಡಿಸಿ ಪೂರ್ವ ಮುದ್ರಿತ ಪ್ಲಾಸ್ಟಿಕ್ ಫೈಲ್, ಪೋಲ್ಡರ್ನಲ್ಲಿ ಹಾಕಿ ಸಿದ್ದಪಡಿಸಿಕೊಳ್ಳಲಾಗುತ್ತದೆ. ಹಾಗೂ   ಉದ್ಘಾಟನೆ ಮಾಡುವ ಗ್ರಾಮದ ಎಲ್ಲಾ ಪೈಲ್/ ಪೋಲ್ಡರ್ಗಳನ್ನು ಒಂದು ದಿನ ಮುಂಚಿತವಾಗಿ ಪರಿಶೀಲಿಸಿ, ಅಗತ್ಯ ಕ್ರಮವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. 
ಕಂದಾಯ ದಾಖಲೆಗಳನ್ನು ರೈತರಿಗೆ ತಲುಪಿಸಿರುವುದಕ್ಕೆ ಮುದ್ದಾಂ ವಹಿಯಲ್ಲಿ ಸ್ವೀಕೃತಿ ಪಡೆಯುವುದು. ಕಡ್ಡಾಯವಾಗಿ ರೈತರ ದೂರವಾಣಿ ಸಂಖ್ಯೆಯನ್ನು ನಮೂದಿಸಲಾಗುತ್ತದೆ. ಫ್ರೂಟ್ಸ್ ತಂತ್ರಾಂಶದಲ್ಲಿ ಲಿಂಕ್ ಆಗಿದ್ದಲ್ಲಿ ದಾಖಲೆಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. 
ಪೈಕಿ ಆರ್ಟಿಸಿಯನ್ನು ತೆಗೆದು ಪ್ರತ್ಯೇಕ ಆರ್ಟಿಸಿ ಮಾಡಲು ವಿಶೇಷ ಅಭಿಯಾನ ನಡೆಯಲಿದೆ. ಜಿಲ್ಲೆಯಲ್ಲಿಯೂ ಸಹ ಆರಂಭವಾಗಲಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 84,672 ಪೈಕಿ ಆರ್ಟಿಸಿಗಳಲ್ಲಿ 9 ಸಾವಿರ ಪೈಕಿ ಆರ್ಟಿಸಿ ಕಡಿಮೆಯಾಗಿದೆ ಎಂದರು.  
ಬೆಳೆ ಸಮೀಕ್ಷೆಯನ್ನು ಕೃಷಿ ಇಲಾಖೆಯಿಂದ ಮಾಡಿದೆ. ಬೆಳೆ ದರ್ಶಕ ಆಯಪ್ ಅದನ್ನು ಸಹ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಅವರು ನುಡಿದರು. 
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ತಹಶೀಲ್ದಾರ್ ಮಹೇಶ್, ಇತರರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ