ಪ್ಲಾಸ್ಟಿಕ್ ಮುಕ್ತ ದೇಶ : ಬಿಜೆಪಿ ಸಂಸದ ಹೇಳಿದ್ದೇನು?

ಬುಧವಾರ, 2 ಅಕ್ಟೋಬರ್ 2019 (16:09 IST)
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆಶಯದಂತೆ ಭಾರತ ದೇಶವನ್ನು ಪ್ಲಾಸ್ಟಿಕ್ ಮುಕ್ತ ದೇಶ ಮಾಡಬೇಕು.

ಈ ಮೂಲಕ ಮುಂದಿನ ಪೀಳಿಗೆ ಸ್ವಚ್ಛ ಪರಿಸರವನ್ನು ಕೊಡುಗೆಯಾಗಿ ನೀಡಲು ಪ್ರತಿಯೊಬ್ಬರು ಸಂಕಲ್ಪ ಮಾಡೋಣ. ಹೀಗಂತ ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಹೇಳಿದ್ದಾರೆ.

ಮಹಾತ್ಮ ಗಾಂಧೀಜಿ ಅವರ 150 ನೇ ಜನ್ಮ ವರ್ಷಾಚರಣೆ ಹಿನ್ನೆಲೆಯಲ್ಲಿ ಟೌನ್ ಹಾಲ್ ಬಳಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ರು. ಪಾಲಿಕೆಯಿಂದ ಆಯೋಜಿಸಲಾದ ಸಾರ್ವಜನಿಕ ಉದ್ಯಾನವನ ಸ್ವಚ್ಛತೆಯ ಶ್ರಮದಾನಕ್ಕೆ ಚಾಲನೆ ನೀಡಿ ಮಾತನಾಡಿದ್ರು. ಗಾಂಧೀ ಕಂಡ ಕನಸು ನನಸು ಮಾಡುವ ನಿಟ್ಟಿನಲ್ಲಿ ಇಂದು ಇಡೀ ದೇಶ ಪ್ಲಾಸ್ಟಿಕ್ ಮುಕ್ತ ಆಂದೋಲನದಲ್ಲಿ ಸಕ್ರಿಯವಾಗಿ ಭಾಗಿಯಾಗಿದೆ.

ಸ್ವಚ್ಛ, ಸುಂದರ ಮತ್ತು ಹಸಿರು ನಮ್ಮೆಲ್ಲರ ಮೂಲಮಂತ್ರವಾಗಬೇಕು. ಬರ ಭೂಮಿಯಾಗಿರುವ ಇಲ್ಲಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೆಚ್ಚಿರುತ್ತದೆ. ಇದನ್ನು ನಿಯಂತ್ರಿಸಲು ಜಲಮೂಲಗಳ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು ಅಂತ ಹೇಳಿದ್ರು.  


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ