ಹಾಸನದಲ್ಲಿ ದುರಂತಕ್ಕೀಡಾದವರಿಗೆ ಪ್ರಧಾನಿ ಮೋದಿಯಿಂದಲೂ ಪರಿಹಾರ

Krishnaveni K

ಶನಿವಾರ, 13 ಸೆಪ್ಟಂಬರ್ 2025 (11:48 IST)
ಹಾಸನ: ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ದುರಂತ ಸಾವನ್ನಪ್ಪಿದವರಿಗೆ ಪ್ರಧಾನಿ ಮೋದಿ ಕೂಡಾ ಸಂತಾಪ ವ್ಯಕ್ತಪಡಿಸಿದ್ದು ಪರಿಹಾರ ಘೋಷಿಸಿದ್ದಾರೆ.

ಹಾಸನದಲ್ಲಿ ನಿನ್ನೆ ಗಣೇಶ ಮೆರವಣಿಗೆ ವೇಳೆ ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿ ಜನರತ್ತ ನುಗ್ಗಿದ ಟ್ರಕ್ 9 ಜನರನ್ನು ಬಲಿತೆಗೆದುಕೊಂಡಿತ್ತು. ಘಟನೆಯಲ್ಲಿ 25 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಘಟನೆ ಇಡೀ ರಾಜ್ಯವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.

ಈ ದುರಂತಕ್ಕೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಮೃತಪಟ್ಟವರ ಕುಟುಂಬಸ್ಥರಿಗೆ ರಾಷ್ಟ್ರೀಯ ಪರಿಹಾರ ನಿಧಿಯಡಿ 2 ಲಕ್ಷ ರೂ. ಪರಿಹಾರ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.

ಇದಕ್ಕೆ ಮೊದಲು ಸಿಎಂ ಸಿದ್ದರಾಮಯ್ಯ ಕೂಡಾ ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಘಟನೆಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಗಾಯಗೊಂಡವರ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ