ಈ ತಿಂಗಳ ಅಂತ್ಯದಲ್ಲಿ ಸಂಸತ್ ಅಧಿವೇಶನ ನಡೆಯಲಿದ್ದು, ಈ ಮೂರು ಕೃಷಿ ಕಾಯ್ದೆ (Three Form Laws)ಗಳನ್ನು ಹಿಂಪಡೆಯಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಇಷ್ಟು ದಿನಗಳ ಕಾಲ ಪ್ರತಿಭಟನೆಯಲ್ಲಿ ನಿರತರಾಗಿರುವ ರೈತರು ಗುರುನಾನಕರ ಜಯಂತಿ (Gurunanak Jayanthi) ಯ ಪವಿತ್ರ ದಿನದಂದು ತಮ್ಮ ಮನೆಗಳಿಗೆ, ವ್ಯವಸಾಯ ಮಾಡುವ ಭೂಮಿಗೆ ತೆರಳಿ ಹೊಸ ಜೀವನ ಆರಂಭಿಸಿ” ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಮನವಿ ಮಾಡಿದ್ದಾರೆ.ಕೇಂದ್ರ ಸರ್ಕಾರ ಈ ಹಿಂದೆ ಜಾರಿಗೆ ತಂದ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಪಂಜಾಬ್, ಹರ್ಯಾಣ, ರಾಜಸ್ತಾನ ಹಾಗೂ ಉತ್ತರಪ್ರದೇಶ ರಾಜ್ಯಗಳ ರೈತರು ಕಳೆದ ವರ್ಷ ನವೆಂಬರ್ ನಿಂದ ನವದೆಹಲಿಯ ಹೊರಗೆ ನಿರಂತರ ಪ್ರತಿಭಟನೆ ಕೈಗೊಂಡಿದ್ದರು. ಉತ್ತರ ಭಾರತ ಹಲವು ರಾಜ್ಯಗಳಲ್ಲಿ ಇದೇ ಕಾರಣಕ್ಕೆ ಬಿಜೆಪಿ ಪಕ್ಷವು ರೈತರ ಕೆಂಗಣ್ಣಿಗೆ ಗುರಿಯಾಗಿತ್ತು. ಮುಂದೆ ಸಾರ್ವತ್ರಿಕ ವಿವಿಧ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ (Assembly Election) ಹಾಗೂ 2024ರಲ್ಲಿ ರಾಷ್ಟ್ರದಲ್ಲಿ ಲೋಕಸಭೆ ಚುನಾವಣೆ (Lokasabha Election) ಹಿನ್ನಲೆಯಲ್ಲಿ ಅನಿವಾರ್ಯವಾಗಿ ರೈತರ ಒತ್ತಡಕ್ಕೆ ಮಣಿದು ಕಾಯ್ದೆ ಹಿಂಪಡೆಯುವ ನಿರ್ಧಾರಕ್ಕೆ ಬಂದಿದ್ದಾಗಿ ವಿಶ್ಲೇಷಿಸಲಾಗುತ್ತಿದೆ.