ಬೆಂಗಳೂರಲ್ಲಿ ಪ್ರಧಾನಿ ಮೋದಿ ರೋಡ್ ಶೋ ಕ್ಯಾನ್ಸಲ್
ಮೋದಿ ರಾಜ್ಯ ಪ್ರವಾಸದ ಕುರಿತು ಮಾಹಿತಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್ ಪ್ರವಾಸ ಮುಗಿಸಿ ನಾಳೆ ನೇರವಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಇಸ್ರೋದ ಎಲ್ಲಾ ವಿಜ್ಞಾನಿಗಳನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಲಿದ್ದಾರೆ, ಸೂರ್ಯಯಾನ ಯೋಜನೆಯ ಬಗ್ಗೆ ಮಾತುಕತೆ ನಡೆಸಲಿದ್ದಾರೆ.ವಿಮಾನ ನಿಲ್ದಾಣದಲ್ಲಿ ಸ್ವಾಗತ ಕಾರ್ಯಕ್ರಮಕ್ಕೆ ಸಿದ್ದತೆ ಆಗಿದೆ ಇದನ್ನು ಹೊರತುಪಡಿಸಿ ರೋಡ್ ಶೋ ಬಗ್ಗೆ ಯಾವುದೇ ಯೋಜನೆ ಇನ್ನೂ ಸಿದ್ಧವಾಗಿಲ್ಲ, ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನ ಕಾರ್ಯಕರ್ತರು ಪ್ರಧಾನಿಗೆ ಸ್ವಾಗತ ಕೋರಲಿದ್ದಾರೆ ಅದಾದ ನಂತರ ಕೇವಲ ಇಸ್ರೋದ ಕಾರ್ಯಕ್ರಮ ಮಾತ್ರ ನಡೆಯಲಿದೆ ಎಂದರು.