ಪ್ರಧಾನಮಂತ್ರಿ ನರೇಂದ್ರ ಮೋದಿ ಹೂ ಮಳೆಗೆರೆಯಲು ಚಮಚಾಗಳನ್ನು ನೇಮಿಸಿಕೊಂಡಿದ್ದಾರೆ ಎಂದು ಮಾಜಿ ಸಿಎಂ, ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ.
ಮೋದಿ ಕಾಶಿ ವಿಶ್ವನಾಥನನ್ನು ಎಷ್ಟೆ ಪೂಜೆ ಮಾಡಿದರೂ ಕೂಡಾ ದೇವರ ಆಶೀರ್ವಾದ ಸಿಗಲ್ಲ. ದತ್ತುಪುತ್ರನನ್ನು ಉತ್ತರಪ್ರದೇಶದ ಜನತೆ ಗುಜರಾತ್‌ಗೆ ವಾಪಸ್ ಕಳುಹಿಸಲಿದ್ದಾರೆ ಎಂದು ಗುಡುಗಿದ್ದಾರೆ.
ಸಮಾಜವಾದಿ- ಕಾಂಗ್ರೆಸ್ ಮೈತ್ರಿಕೂಟ ಮತ್ತು ಬಿಜೆಪಿ ಎರಡು ಮತ್ತು ಮೂರನೇ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿವೆ. ಬಿಎಸ್‌ಪಿ ಪಕ್ಷ ಮೊದಲನೇ ಸ್ಥಾನದಲ್ಲಿದೆ ಎಂದು ಲೇವಡಿ ಮಾಡಿದ್ದಾರೆ.
ವಾರಣಾಸಿಯಲ್ಲಿ ಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಪ್ರಧಾನಿ ಮೋದಿ ಈಡೇರಿಸಿಲ್ಲ. ನೋಟ್‌ಬ್ಯಾನ್‌ನಿಂದ ಬಡವರು ಮತ್ತು ಮಧ್ಯಮ ವರ್ಗದವರು ತಮ್ಮ ಜೀವನವನ್ನೇ ಕಳೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ತಮ್ಮ ಇಡೀ ಸಚಿವ ಸಂಪುಟವನ್ನು ವಾರಣಾಸಿಗೆ ತಂದು ನಿಲ್ಲಿಸಿದರೂ ಕೂಡಾ ಯಾವುದೇ ಪ್ರಯೋಜನವಾಗುವುದಿಲ್ಲ. ಉತ್ತರಪ್ರದೇಶದಲ್ಲಿ ಬಿಎಸ್‌ಪಿ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.