ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ರಾಜ್ಯಕ್ಕೆ ಆಘಾತ ತಂದಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆಯನ್ನು ಬಿಜೆಪಿ ನಾಯಕರು ಬಹಿಷ್ಕರಿಸಿ ಮೌನವಹಿಸಿದ್ದೇಕೆ. ಕಾವೇರಿ ವಿಷಯದಲ್ಲಿ ಬಿಜೆಪಿ ನಾಯಕರು ರಾಜಕೀಯ ಬಿಟ್ಟು ಮಾತನಾಡಬೇಕು ಎಂದು ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ ಕಿಡಿಕಾರಿದರು.