ಮೋದಿ ಸಮಾವೇಶಕ್ಕೆ ಬಿಜೆಪಿ ಬೆಂಬಲಿಗರಿಂದಲೇ ಅಡ್ಡಿಪಡಿಸಲು ನಡೆದಿದೆ ಸಂಚು!
ಮುಂಬರುವ ಚುನಾವಣೆ ದೃಷ್ಟಿಯಿಂದ ಪ್ರಧಾನಿ ಮೋದಿ ರಾಜ್ಯದ ವಿವಿಧೆಡೆ ಐದು ದಿನಗಳ ಕಾಲ ಪ್ರವಾಸ ಮಾಡಲಿದ್ದು, 15 ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೆ ಬಿಜೆಪಿ ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ.
ಆದರೆ ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಬೆಂಬಲಿಗರಿಂದಲೇ ಸಮಾವೇಶಕ್ಕೆ ಅಡ್ಡಿಪಡಿಸಲು ಸಂಚು ನಡೆದಿದೆ. ಚಾಮರಾಜನಗರ ಜಿಲ್ಲೆಯಲ್ಲಿ ನಡೆಯಲಿರುವ ಸಮಾವೇಶದ ಸಂದರ್ಭದಲ್ಲಿ ವರುಣಾ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ವಿಜಯೇಂದ್ರ ಬೆಂಬಲಿಗರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.