ಪ್ರಧಾನಿ ಮೋದಿ ಸರ್ಕಾರದಿಂದ ಸಿಬಿಐ ದುರ್ಬಳಕೆ: ದೇವೇಗೌಡ

ಬುಧವಾರ, 4 ಜನವರಿ 2017 (16:31 IST)
ಸಿಬಿಐ ಇಲಾಖೆಯನ್ನು ಕೇಂದ್ರ ಸರಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಗಂಭೀರವಾಗಿ ಆರೋಪಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪ್ಪು ಹಣ ತಡೆಗಟ್ಟುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟ ಹೆಚ್ಚೆ ಇಟ್ಟಿದ್ದಾರೆ. ದೇಶದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ನೋಟ್ ಬ್ಯಾನ್‌ನಂತಹ ದಿಟ್ಟ ನಿರ್ಧಾರ ಕೈಗೊಳ್ಳಲಾಗಿದೆ. ನೋಟ್ ಬ್ಯಾನ್‌ ನಿರ್ಧಾರವನ್ನು ಜೆಡಿಎಸ್ ಸಹ ಬೆಂಬಲಿಸಿದೆ. ಆದರೆ, ಪೂರ್ವ ಚಿಂತನೆ ಇಲ್ಲದೆ ಏಕಾಏಕಿ ನೋಟು ನಿಷೇಧ ಮಾಡಿರುವುದು ತಪ್ಪು ಎಂದು ಅಭಿಪ್ರಾಯಪಟ್ಟರು.
 
ಡಿಸೆಂಬರ್ 31 ರ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದಿಂದ ನಿರಾಸೆ ಉಂಟಾಗಿದೆ. ಅವರಿಂದ ಇಂತಹದನ್ನು ನಿರೀಕ್ಷಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. 
 
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು 20 ತಿಂಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ರೈತರ ಎರಡುವರೆ ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದರು. ಆದರೆ, ಪ್ರಧಾನಿ ಮೋದಿ ಅವರು ರೈತರ ಸಾಲದ ಮೇಲಿನ ಎರಡು ತಿಂಗಳ ಬಡ್ಡಿ ಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ. ಇದಕ್ಕಿಂತ ಅಪಹಾಸ್ಯದ ಸಂಗತಿ ಬೇರೆ ಇದೆಯೇ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪ್ರಶ್ನಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ