ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ವಿಜೇತರೊಂದಿಗೆ ಪ್ರಧಾನಿ ಮೋದಿ ಸಂವಾದ

ಬುಧವಾರ, 6 ಸೆಪ್ಟಂಬರ್ 2023 (20:37 IST)
ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2023 ವಿಜೇತರ ಜತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ನವದೆಹಲಿಯ  ಲೋಕ್ ಕಲ್ಯಾಣ್ ಮಾರ್ಗ್‌ದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಅವರೊಂದಿಗೆ ಅದ್ಭುತ ಕ್ಷಣಗಳನ್ನು ಕಳೆದರು. ಸಭೆಯಲ್ಲಿ ಶಿಕ್ಷಕರೊಬ್ಬರು ಪ್ರಧಾನಿ ಮೋದಿ ಅವರ ಬಳಿ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಭಾರತದ ಹೆಸರು ತುಂಬಾ ಎತ್ತರದಲ್ಲಿದೆ.ನೀವು ಪ್ರತಿದಿನ ನಿರಂತರ ಪ್ರಯತ್ನಗಳನ್ನು ಮಾಡುತ್ತಿದ್ದೀರಿ, ಆದರೂ ನೀವು ಇನ್ನೂ ಪ್ರಕಾಶಮಾನವಾದ ಮತ್ತು ಹರ್ಷಚಿತ್ತದಿಂದ ಮುಖವನ್ನು ಹೊಂದಿದ್ದೀರಿ ತರಗತಿಯಲ್ಲಿ ಮಕ್ಕಳು ನಮ್ಮನ್ನು ನೋಡುವಂತೆ ನಾವು ನಿಮ್ಮನ್ನು ನೋಡುತ್ತಿದ್ದೇವೆ ಎಂದ್ರು. ಈ ಕುರಿತು ಪ್ರಧಾನಿ ಮೋದಿ ಟ್ವಿಟ್ಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಯನ್ನು ಪಡೆದ ನಮ್ಮ ರಾಷ್ಟ್ರದ ಆದರ್ಶ ಶಿಕ್ಷಕರನ್ನು ಭೇಟಿ ಮಾಡಿದೆ. ಯುವ ಮನಸ್ಸುಗಳನ್ನು ರೂಪಿಸುವಲ್ಲಿ ಅವರ ಸಮರ್ಪಣೆ ಮತ್ತು ಶಿಕ್ಷಣದಲ್ಲಿ ಉತ್ಕೃಷ್ಟತೆಯ ಕಡೆಗೆ ಅವರ ಅಚಲ ಬದ್ಧತೆ ಬಹಳ ಸ್ಪೂರ್ತಿದಾಯಕವಾಗಿದೆ. ತಮ್ಮ ತರಗತಿಗಳಲ್ಲಿ, ಅವರು ಭಾರತದ ಯುವಕರಿಗೆ ಉಜ್ವಲ ಭವಿಷ್ಯವನ್ನು ಬರೆಯುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ