ಡಿಜಿಟಲ್ ಪೇಮೆಂಟ್ ಇ-ರುಪಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುವ ಮೂಲಕ ದೇಶದಲ್ಲಿ ಡಿಜಿಟಲೀಕರಣಕ್ಕೆ ಹೊಸ ಆಯಾಮ ನೀಡಿದ್ದಾರೆ.
ಡಿಜಿಟಲ್ ಪಾವತಿಯನ್ನು ಸರಳಗೊಳಿಸುವ ಸಲುವಾಗಿ ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಹೊಸ ಡಿಜಿಟಲ್ ಪಾವತಿ ವ್ಯವಸ್ಥೆಯಾಗಿದೆ. ಇದು ನಗದು ರಹಿತವಾಗಿ, ಇಂಟರ್ ನೆಟ್ ಸಂಪರ್ಕವಿಲ್ಲದೆ, ಕ್ಯೂಆರ್ ಕೋಡ್ ಅಥವಾ ಎಸ್ಎಂಎಸ್ ಆಧಾರಿತ ಇ-ವೋಚರ್ ನ ಡಿಜಿಟಲ್ ಪಾವತಿ ವ್ಯವಸ್ಥೆಯಾಗಿದೆ.
ಯಾರು ಇ-ರುಪಿ ಫಲಾನುಭವಿಗಳಿರುತ್ತಾರೋ ಅವರ ಮೊಬೈಲ್ಗೆ ಸಂದೇಶದ ಮೂಲಕ ಕಳುಹಿಸಬಹುದು. ಕಾರ್ಡ್, ಡಿಜಿಟಲ್ ಪಾವತಿ ತಂತ್ರಾಂಶ ಅಥವಾ ಇಂಟರ್ನೆಟ್ ಬ್ಯಾಕಿಂಗ್ ಬಳಸದೇ ಇ-ರುಪೀ ಸಂದೇಶದ ಮೂಲಕ ವೋಚರ್ ಬಳಸಬಹುದಾಗಿದೆ.
ಹಣಕಾಸು ಸೇವೆಗಳ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ ಈ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ.
ದೇಶದಲ್ಲಿ ಈಗಾಗಲೇ ಕೊರೊನಾದಿಂದಾಗಿ ಶಿಕ್ಷಣ ಕ್ಷೇತ್ರದಲ್ಲೂ ಡಿಜಿಟಲ್ ಬದಲಾವಣೆಗಳು ನಡೆಯುತ್ತಿವೆ. ಇದರೊಂದಿಗೆ ಇದೀಗ ಡಿಜಿಟಲ್ ಕ್ಷೇತ್ರಕ್ಕೆ ಇ-ರುಪಿ ಕಾಲಿಡುತ್ತಿದೆ.