ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ಮೋದಿ, ಅಂಬಾನಿ ಅದಾನಿಯಿಂದ ಎಷ್ಟು ಕಪ್ಪು ಹಣ ತೆಗೆದುಕೊಂಡಿರಿ ಎಂದು ವ್ಯಂಗ್ಯ ಮಾಡಿದ್ದಾರೆ.
ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸುವಾಗಲೆಲ್ಲಾ ರಾಹುಲ್ ಗಾಂಧಿ ಉದ್ಯಮಿಗಳಾದ ಅಂಬಾನಿ ಮತ್ತು ಅದಾನಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ, ಅವರ ಸಾಲ ಮನ್ನಾ ಮಾಡಿದ್ದಾರೆ ಎಂದೆಲ್ಲಾ ಆರೋಪ ಹೊರಿಸುತ್ತಾರೆ. ಆದರೆ ಇತ್ತೀಚೆಗೆ ಆ ವಿಚಾರವನ್ನುಹೇಳಿಲ್ಲ.
ಹೀಗಾಗಿ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಈ ರೀತಿ ಟಾಂಗ್ ಕೊಟ್ಟಿದ್ದಾರೆ. ಚುನಾವಣೆ ಘೋಷಿಸುತ್ತಿದ್ದಂತೇ ರಾಹುಲ್ ಗಾಂಧಿ ಇಬ್ಬರು ಉದ್ಯಮಿಗಳ ಜಪ ಮಾಡುವುದನ್ನು ನಿಲ್ಲಿಸಿದ್ದು ಯಾಕೆ? ಈವತ್ತು ತೆಲಂಗಾಣದಿಂದ ಒಂದು ಪ್ರಶ್ನೆ ಮಾಡಲು ಬಯಸುತ್ತೇನೆ. ರಾತ್ರೋ ರಾತ್ರಿ ಅಂಬಾನಿ, ಅದಾನಿಯನ್ನು ಬಯ್ಯುವುದನ್ನು ನಿಲ್ಲಿಸಿದ್ದಾರೆ ಎಂದರೆ ಏನೋ ಇರಬೇಕು. ಯಾವುದೋ ಕಳ್ಳ ಮಾಲು ಟೆಂಪೋದೊಳಗೆ ಬಂದಿರಬೇಕು ಎಂದು ವ್ಯಂಗ್ಯ ಮಾಡಿದ್ದಾರೆ.
ಇಂದು ತೆಲಂಗಾಣದ ಸಿರಿಸಲ್ಲ ಜಿಲ್ಲೆಯಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸಿದ್ದಾರೆ. ಇದಕ್ಕೆ ಮೊದಲು ಅವರು ವೇಮುಲವಾಡದ ರಾಜನ್ನ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮೋದಿ ಜೊತೆಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡಾ ಇಂದು ತೆಲಂಗಾಣದಲ್ಲಿ ಪ್ರಚಾರ ನಡೆಸಲಿದ್ದಾರೆ.