ಅತ್ತ ಪ್ರಧಾನಿ ಮೋದಿ, ಇತ್ತ ರಾಹುಲ್ ಗಾಂಧಿ ಬೀದರ್ ಗೆ
ಈಗಾಗಲೇ ಪ್ರಧಾನಿ ಮೋದಿ ಬೀದರ್ ಗೆ ಹೆಲಿಕಾಪ್ಟರ್ ಮೂಲಕ ಬಂದಿಳಿದರು. ನಂತರ ಕುಲಬರ್ಗಿಗೆ ವಿಶೇಷ ಸೇನಾ ಹೆಲಿಕಾಪ್ಟರ್ ನಲ್ಲಿ ತೆರಳಿದರು. ಇಲ್ಲಿ ಅವರು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಇಂದು ಪ್ರಧಾನಿ ಮೋದಿ ಬೀದರ್, ಕುಲಬರ್ಗಿ ಮತ್ತು ಬಳ್ಳಾರಿಯಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡಾ ಇಂದು ಬೀದರ್ ಗೆ ಪ್ರಯಾಣ ಬೆಳೆಸಲಿದ್ದು, ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ. ಹೀಗಾಗಿ ಬೀದರ್ ನಲ್ಲಿ ಇಂದು ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ನಡುವೆ ವಾರ್ ಆಫ್ ಟಾಕ್ ನಡೆಯುವುದು ಖಚಿತವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.