ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಬರಗಾಲ ಬಂದಾಗಲೂ ಬಂದಿಲ್ಲ, ತೆರಿಗೆಯಲ್ಲಿ ಅನ್ಯಾಯವಾದಾಗಲೂ ಬಂದಿಲ್ಲ. ಚುನಾವಣೆ ಬಂದಾಗ ಮೋದಿ ಅವರು ಮೇಲಿಂದ ಮೇಲೆ ಬರ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಟೀಕಿಸಿದ್ದಾರೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಮ್ಮ ನಾಡಿಗೆ ಪ್ರವಾಹ ಬಂದಾಗ @narendramodi
ಬರಲಿಲ್ಲ, ಬರಗಾಲ ಬಂದಾಗಲೂ ಮೋದಿ ಬರಲಿಲ್ಲ, ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗಲೂ ಮೋದಿ ಬರಲಿಲ್ಲ. ಚುನಾವಣೆ ಬಂತು ನೋಡಿ - ಮೋದಿ ರಾಜ್ಯಕ್ಕೆ ಮೇಲಿಂದ ಮೇಲೆ ಬರ್ತಾರೆ.
ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ @BJP4Karnataka
. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ @BJP4India
ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಸೆಕ್ಯುಲರ್ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ದೇವೇಗೌಡರು ಸಿದ್ದರಾಮಯ್ಯರಿಗೆ ಗರ್ವ ಇದೆ ಎನ್ನುತ್ತಿದ್ದಾರೆ.
ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳಿಗೆ ಮಾಡುವ ವಿರೋಧ. ಯಾವುದೇ ಕಾರಣಕ್ಕೂ ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ. 3/4