ರಾಜ್ಯಕ್ಕೆ ಪ್ರಧಾನಿ ಮೋದಿ 4 ಬಾರಿ ಬರಲಿದ್ದಾರೆ : ಪ್ರಹ್ಲಾದ್ ಜೋಶಿ
ಧಾರವಾಡ ಹೊರವಲಯದ ಮುಮ್ಮಿಗಟ್ಟಿ ಗ್ರಾಮದ ಹಿಂದೆ ನಿರ್ಮಾಣವಾಗುತ್ತಿರುವ ಐಐಟಿ ಕ್ಯಾಂಪಸ್ಗೆ ಭೇಟಿ ನೀಡಿದ ಜೋಶಿ ಪರಿಶೀಲನೆ ನಡೆಸಿ, ಕಟ್ಟಡ ಕಾಮಗಾರಿ ಮುಕ್ತಾಯದ ಕುರಿತು ಮಾಹಿತಿ ಪಡೆದುಕೊಂಡರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆಗೆ ಬರಲಿದ್ದಾರೆ. ಜನವರಿ 1ನೇ ತಾರೀಖಿಗೆ ಉದ್ಘಾಟನೆ ಮಾಡಬೇಕು ಎಂಬ ಯೋಜನೆಯಿದೆ. ಕಟ್ಟಡ ತಯಾರಾದರೆ ಅದೇ ದಿನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.