ಪೋಕ್ಸೋ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪಗೆ ರಿಲೀಫ್

sampriya

ಶುಕ್ರವಾರ, 14 ಜೂನ್ 2024 (18:02 IST)
ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬಂಧನದ ಭೀತಿ ಎದುರಿಸುತ್ತಿದ್ದ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸದ್ಯದ ರಿಲೀಫ್‌ ಸಿಕ್ಕಿದೆ. ಮುಂದಿನ ವಿಚಾರಣೆ ತನಕ ಯಡಿಯೂರಪ್ಪ ವಿರುದ್ಧ ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಸೂಚನೆ ನೀಡಿದೆ.

ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗುತ್ತಿದ್ದಂತೆಯೇ ಮಾಜಿ ಸಿಎಂ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು, ಮುಂದಿನ ವಿಚಾರಣೆ ತನಕ ಬಲವಂತದ ಕ್ರಮಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್‌ ಸೂಚಿಸಿದೆ.

ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ಸಹಜವಾಗಿ ಅನಾರೋಗ್ಯದ ಸಮಸ್ಯೆಗಳಿರುತ್ತವೆ. ಅವರು ತನಿಖಾ ತಂಡದ ಎದುರು ಜೂ.17 ರಂದು ಹಾಜರಾಗುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಅವರನ್ನು ಬಂಧಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇದೇ ವೇಳೆ ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಯಡಿಯೂರಪ್ಪಗೆ ಸೂಚಿಸಿದೆ.

ಬಿಎಸ್‌ವೈ ಪರ ವಕೀಲ ನಾಗೇಶ್ ಮಾತನಾಡಿ, ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸೂಚನೆ ನೀಡಿ. ಈಗಾಗಲೇ ಆರೋಪಿ ವಿರುದ್ಧ ಅರೆಸ್ಟ್ ವಾರೆಂಟ್ ಮಾಡಿಸಿಕೊಂಡಿದ್ದಾರೆ. ಪ್ರಕರಣದ ವಿಚಾರಣೆಯನ್ನೇ ಮಾಡಬಾರದು ಎಂದು ವಾದ ಮಂಡಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ