ಫೋಕ್ಸೋ ಪ್ರಕರಣ: ಯಡಿಯೂರಪ್ಪ ಬಂಧಿಸದಂತೆ ಮಧ್ಯಂತರ ಜಾಮೀನು ವಿಸ್ತರಣೆ

Sampriya

ಶುಕ್ರವಾರ, 28 ಜೂನ್ 2024 (19:07 IST)
ಬೆಂಗಳೂರು:ಫೋಕ್ಸೋ ಪ್ರಕರಣ ಸಂಬಂಧ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬಿಗ್‌ ರಿಲೀಫ್ ಸಿಕ್ಕಿದೆ. ಫೋಕ್ಸೋ ಪ್ರಕರಣದ ಸಂಬಂಧ ಬಿ ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಜಾರ್ಜ್‌ಶೀಟ್ ಬೆನ್ನಲ್ಲೇ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನನ್ನು ನ್ಯಾಯಾಲಯ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಪ್ರಕರಣ ಸಂಬಂಧ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸಲಾರದೆಂದು ಜೂನ್ 14ರವರೆಗೆ ತಡೆ ನೀಡಿತ್ತು. ಇದೀಗ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನನ್ನು ನ್ಯಾಯಾಲಯ ವಿಸ್ತರಣೆ ಮಾಡಿದೆ.

ಅತ್ಯಾಚಾರ ನಡೆದ ಬಗ್ಗೆ  ದೂರು ನೀಡಲು ಬಂದ ಸಂತ್ರಸ್ತೆ ಜತೆ ಬಿಎಸ್ ಯಡಿಯೂರಪ್ಪ ಅನುಚಿತವಾಗಿ ವರ್ತಿಸಿದ್ದಾರೆಂದು ದೂರು ನೀಡಲಾಗಿತ್ತು. ಅದರಂತೆ ಬಿಎಸ್ ಯಡಿಯೂರಪ್ಪ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಬಿಎಸ್‌ವೈ ಜತೆಗೆ ಅರುಣ್‌ ಎಂವೈ, ಎಂ.ರುದ್ರೇಶ್‌, ಜಿ.ಮರಿಸ್ವಾಮಿ ಎಂಬುವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು.

ಇದಕ್ಕೆ ಸಂಬಂಧಿಸಿ ಒಂದನೇ ಪೋಕ್ಸೊ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಗುರುವಾರ ಚಾರ್ಜ್‌ ಶಿಟ್‌ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮಧ್ಯಂತರ ಜಾಮೀನು ವಿಸ್ತರಣೆಯಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ