ವಿಷ ಪ್ರಸಾದ ಪ್ರಕರಣ; ದೇಗುಲಕ್ಕೆ ಸಚಿವ ಭೇಟಿ
ವಿಷಪ್ರಸಾದ ದುರಂತದಲ್ಲಿ ಹದಿನೇಳು ಜನರ ಸಾವಿಗೆ ಕಾರಣವಾದ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಾಲಯಕ್ಕೆ ಮುಜರಾಯಿ ಇಲಾಖೆ ಸಚಿವ ಭೇಟಿ ನೀಡಿದರು.
ಸಚಿವ ಪರಮೇಶ್ವರ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವಾಲಯವನ್ನು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸ್ಥಳದಲ್ಲೇ ಮಾರ್ಗದರ್ಶನ ನೀಡಿದರು.
ದೇವಾಲಯದ ಆವರಣದಲ್ಲಿರುವ ಹುಂಡಿಯನ್ನು ಕೂಡಲೇ ವಶಕ್ಕೆ ತೆಗೆದುಕೊಳ್ಳುವಂತೆ ಆದೇಶ ನೀಡಿದರು. ಮೃತರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ದೇವಾಲಯದ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಸಿದ ಸಚಿವರು, ಸರ್ಕಾರ ಈ ದುರಂತವನ್ನು ಗಂಭೀರವಾಗಿ ಪರಿಗಣಿಸಿದೆ. ಜಿಲ್ಲಾಧಿಕಾರಿಗಳಿಂದ ವರದಿ ಪಡೆದುಕೊಂಡಿದ್ದೇನೆ. ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ತೆಗೆದುಕೊಳ್ಳುವ ನಿರ್ಧಾರವನ್ನು ಸಧ್ಯದಲ್ಲೇ ಹೊರಡಿಸಲಾಗುವುದು ಎಂದು ಹೇಳಿದರು.