ತೀವ್ರ ವಿಚಾರಣೆ ನಂತರ ದೇವರಾಜೇಗೌಡರನ್ನು ಬಂಧಿಸಿದ ಪೊಲೀಸರು
ನಿನ್ನೆ ಚಿತ್ರದುರ್ಗ ಬಳಿಯ ಕೆ.ಆರ್. ಹಳ್ಳಿ ಗೇಟ್ ಬಳಿ ಹಿರಿಯೂರು ಗ್ರಾಮಾಂತರ ಪೊಲೀಸರು ದೇವರಾಜೇಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರ ತಂದೆ ಮತ್ತು ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ವಿರುದ್ಧ ಸ್ಪರ್ಧಿಸಿದ್ದ ದೇವರಾಜೇಗೌಡ, ಲೈಂಗಿಕ ಕಿರುಕುಳದ ವೀಡಿಯೊಗಳನ್ನು ಸೋರಿಕೆ ಮಾಡಿದ್ದಕ್ಕಾಗಿ ರಾಜ್ಯದ ಕಾಂಗ್ರೆಸ್ ನಾಯಕರನ್ನು ದೂಷಿಸಿದ್ದರು.