ಮೊಬೈಲ್ ಕಳ್ಳರನ್ನ ಬಂಧಿಸಿದ ಪೊಲೀಸರು

ಶುಕ್ರವಾರ, 6 ಜನವರಿ 2023 (20:12 IST)
ಕಳ್ಳತನ ಮಾಡಿದ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಾ ಸಾರ್ವಜನಿಕರ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ಮೂವರು ಕುಖ್ಯಾತ ಆರೋಪಿಗಳನ್ನ ಮೈಕೋ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.ಮಾರಿಮುತ್ತು, ಸೈಯ್ಯದ್ ಶುಹೇಬ್ ಹಾಗೂ ಭರತ್ ಬಂಧಿತರು.
 
ಡಿಸೆಂಬರ್ 28ರಂದು ಸಂಜೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಆರೋಪಿಗಳು ಬಿಳೇಕಹಳ್ಳಿ ಬಳಿ ಸುಜಿತ್ ಎಂಬಾತನ ಕೈಯಲ್ಲಿದ್ದ ಐಪೋನ್ ಎಗರಿಸಿ ಪರಾರಿಯಾಗಿದ್ದರು. ಫೋನ್ ಕಳೆದುಕೊಂಡ ಸುಜಿತ್ ತಕ್ಷಣ ಪೊಲೀಸ್ ಕಂಟ್ರೋಲ್ ರೂಮ್ ಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದರು. ಘಟನೆ ವರದಿಯಾಗಿ ಎರಡು ಗಂಟೆಯೊಳಗೆ ಕ್ಷಿಪ್ರ ಕಾರ್ಯಾಚರಣೆ ಕೈಗೊಂಡ ಮೈಕೋಲೇಔಟ್ ಠಾಣಾ ಪೊಲೀಸರು ಫೋನ್ ಲೊಕೇಶನ್ ಆಧರಿಸಿ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ‌. ತನಿಖೆ ಸಂದರ್ಭದಲ್ಲಿ ಆರೋಪಿಗಳು ಇದುವರೆಗೂ ಆಗ್ನೇಯ ವಿಭಾಗದ ವಿವಿಧೆಡೆ ಕೃತ್ಯ ಎಸಗಿರುವುದು ಪತ್ತೆಯಾಗಿದ್ದು 8.50 ಲಕ್ಷ ಮೌಲ್ಯದ 35 ಮೊಬೈಲ್ ಫೋನ್‌ಗಳು, ಎರಡು ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ