ಮಾಮೂಲಿ ನೀಡದ್ದಕ್ಕೆ ದಂಪತಿಗಳ ಮೇಲೆ ಪೊಲೀಸರಿಂದ ಹಲ್ಲೆ

ಶುಕ್ರವಾರ, 13 ಅಕ್ಟೋಬರ್ 2017 (13:15 IST)
ಯಲಹಂಕ ನಗರದ ಎನ್‌ಇಎಸ್ ಸರ್ಕಲ್ ಬಳಿ ಟೀ ಅಂಗಡಿಯಿಟ್ಟು ವ್ಯಾಪಾರ ಮಾಡುತ್ತಿದ್ದ ದಂಪತಿಗಳ ಮಾಮೂಲಿ ನೀಡಿಲ್ಲವೆಂಬ ಕಾರಣಕ್ಕೆ ಪೊಲೀಸರು ಹಲ್ಲೆ ಮಾಡಿದ ಘಟನೆ ವರದಿಯಾಗಿದೆ.
ಫುಟ್‌ಪಾತ್‌ನಲ್ಲಿ ಟೀ ಅಂಗಡಿ ನಡೆಸುತ್ತಿದ್ದ ದಂಪತಿಗಳಾದ ರಾಜು ಮತ್ತು ಪತ್ನಿ ಅಂಬಿಕಾ ಮೇಲೆ ರಾತ್ರಿ ಗಸ್ತಿನಲ್ಲಿದ್ದ ಪೊಲೀಸರು ಹಲ್ಲೆ ನಡೆಸಿ, ಮಾಮೂಲಿ ಹಣ ನೀಡದಿದ್ದರೆ ವ್ಯಾಪಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು ಧಮ್ಕಿ ಹಾಕಿದ್ದಾರೆ ಎಂದು ದಂಪತಿಗಳು ತಿಳಿಸಿದ್ದಾರೆ. 
 
ಸ್ಥಳೀಯರು  ಅಮಾಯಕ ದಂಪತಿಗಳ ಮೇಲೆ ನಡೆದ ಹಲ್ಲೆಯ ಬಗ್ಗೆ ಪೊಲೀಸರನ್ನ ಪ್ರಶ್ನಿಸಿದ್ದರಿಂದ ಸ್ಥಳೀಯರ ಜೊತೆಯೂ ಪೊಲೀಸರು ಅಸಭ್ಯ ವರ್ತನೆ ತೋರಿದ್ದಾರೆ ಎನ್ನಲಾಗಿದೆ.
 
ಯಲಹಂಕ ಉಪನಗರ ಪೊಲೀಸ್ ಠಾಣೆಯ ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಯ ಹೇಯ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಹಿರಿಯ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ