ಹೈಟೆಕ್ ವೇಶ್ಯಾವಾಟಿಕೆ ಭೇದಿಸಿದ ಪೊಲೀಸರು
ವೇಶ್ಯಾವಾಟಿಕೆ ನಡೆಸಲು ಸಹೋದರಿಗೆ ನೆರವು ನೀಡುತ್ತಿದ್ದ ಸಹೋದರ ಯುವತಿಯರ ಚಿತ್ರಗಳನ್ನು ವಾಟ್ಸಪ್ ನಲ್ಲಿ ಕಳುಹಿಸಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.
ಬೋಗಾದಿಯ ರೈಲ್ವೆ ಬಡಾವಣೆಯಲ್ಲಿ ಮನೆಯೊಂದನ್ನು ಬಾಡಿಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ಸಹೋದರ ಹಾಗೂ ಗ್ರಾಹಕನನ್ನು ಬಂಧಿಸಿ, ಯುವತಿಯನ್ನು ರಕ್ಷಣೆ ಮಾಡಿದ್ದಾರೆ.
ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರಿಂದ ಕಾರು, ಬೈಕ್ ಹಾಗೂ ನಾಲ್ಕು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.