ಪೊಲೀಸ್ ಸಂಸ್ಮರಣಾ ದಿನಾಚರಣೆ: ಹುತಾತ್ಮ ಪೊಲೀಸರಿಗೆ ಗೌರವ ಸಲ್ಲಿಸಿದ ಮುಖ್ಯಮಂತ್ರಿ

ಗುರುವಾರ, 21 ಅಕ್ಟೋಬರ್ 2021 (21:21 IST)
ಹುಬ್ಬಳ್ಳಿ, ಅಕ್ಟೋಬರ್ 21- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿಯಲ್ಲಿ ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ  ಭಾಗವಹಿಸಿದರು.
 
ಹುಬ್ಬಳ್ಳಿಯ ಸಿಎಆರ್ ಮೈದಾನದಲ್ಲಿ ಇಂದು ಮುಂಜಾನೆ ನಡೆದ ಕಾರ್ಯಕ್ರಮದಲ್ಲಿ  ಪೊಲೀಸ್ ಹುತಾತ್ಮ ಸ್ಮಾರಕಕ್ಕೆ ಗೌರವ ಅರ್ಪಣೆ  ಭಾವಪೂರ್ಣ  ಶ್ರದ್ಧಾಂಜಲಿ ಸಲ್ಲಿಸಿದರು.
 
ವಿಧಾನ‌ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕ ಪ್ರಸಾದ ಅಬ್ಬಯ್ಯ, ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ ರೆಡ್ಡಿ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಉಪಸ್ಥಿತರಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ