ಪೊಲೀಸರ ಕೊರೊನಾ ಪರೀಕ್ಷೆ : ವರದಿಯಲ್ಲಿ ಇರೋದೇನು?

ಬುಧವಾರ, 27 ಮೇ 2020 (17:16 IST)
ಕೊರೊನಾ ವಾರಿಯರ್ಸ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಆರೋಗ್ಯ ಹಿತರಕ್ಷಣೆ ಕಾಯಲು ಪೊಲೀಸ್ ಇಲಾಖೆ ಸೂಕ್ತ ಕ್ರಮಗಳನ್ನ ಕೈಗೊಂಡಿದೆ.

ಈಗಾಗಲೇ ಉಡುಪಿ ಜಿಲ್ಲೆಯ ಕುಂದಾಪುರ ಉಪವಿಭಾಗದ ಎಲ್ಲಾ ಪೊಲೀಸರಿಗೆ ಮಾಸ್ಕ್ , ಫೇಸ್ ಶೀಲ್ದ್ ಮೊದಲಾವುಗಳನ್ನ ನೀಡಲಾಗಿದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಮಾತ್ರೆಗಳನ್ನ ಪೊಲೀಸರು ಹಾಗೂ ಅವರ ಕುಟುಂಬಸ್ಥರಿಗೆ ವಿತರಿಸಲಾಗಿದೆ.

ಬಹುತೇಕ ಪೊಲೀಸ್ ಠಾಣೆಗಳನ್ನ ಸ್ಯಾನಿಟೈಸ್ ಮಾಡಲಾಗಿದೆ ಎಂದು ಕುಂದಾಪುರ ತಾಲೂಕಿನ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.

ಈಗಾಗಲೇ 180 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಸದ್ಯ 48 ಮಂದಿ ಪೊಲೀಸರ ವರದಿ ಬಂದಿದ್ದು, ಎಲ್ಲವೂ ನೆಗಟೀವ್ ಆಗಿವೆ. ಇನ್ನು ಶಿರೂರು ಚೆಕ್ ಪೋಸ್ಟ್ ನಲ್ಲಿ ಕೆಲಸ ಮಾಡುವ ಪೊಲೀಸ್ ಸಿಬ್ಬಂದಿಯ ಆರೋಗ್ಯದ ಹಿತರಕ್ಷಣೆ ಕಾಪಾಡುವ ನಿಟ್ಟಿನಲ್ಲಿ ಗ್ಲಾಸ್ ಕೌಂಟರ್ ನಿರ್ಮಾಣ ಮಾಡುವ ಚಿಂತನೆ ನಡೆಸಿದ್ದೇವೆ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ