ಕಾಂಗ್ರೆಸ್ ಗೆಲುವು ಸಾಧಿಸುತ್ತಿದ್ದಂತೆ ಅಲರ್ಟ್ ಆದ ಪೊಲೀಸ್ ಇಲಾಖೆ

ಶನಿವಾರ, 13 ಮೇ 2023 (19:00 IST)
ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ಟೈಟ್ ಸೆಕ್ಯೂರಿಟಿ ಮಾಡಲಾಗಿದೆ.ಸಿದ್ದರಾಮಯ್ಯ ನಿವಾಸದ ಬಳಿ ಖಾಕಿಪಡೆ ಬ್ಯಾರಿಕೆಡ್ ಅಳವಡಿಸಿದೆ.ಶಿವಾನಂದ ವೃತ್ತ ಬಳಿ ಇರುವ ಸಿದ್ದರಾಮಯ್ಯ ಸರ್ಕಾರಿ ನಿವಾಸಕ್ಕೆ 50 ಕ್ಕೂ ಹೆಚ್ಚು ಪೋಲೀಸರ ನಿಯೋಜನೆ ಮಾಡಲಾಗಿದೆ.ಅಲ್ಲದೇ ಕೈ ಕಾರ್ಯಕರ್ತರು ಸಿದ್ದರಾಮಯ್ಯ ‌ನಿವಾಸದ ಎದುರು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು.
 
 
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ ಸಿದ್ದರಾಮಯ್ಯ ಮನೆಗೆ ಕೈ ಕಾರ್ಯಕರ್ತರು ಆಗಮಿಸಿದ್ದು,ಸಿಹಿ ಹಂಚಿ ಗೆಲುವನ್ನು ಕೈ ಕಾರ್ಯಕರ್ತರು ಸಂಭ್ರಮಿಸಿದ್ರು.ಈ ಬಾರಿ ಮತ್ತೆ ಸಿಎಂ ಸಿದ್ದರಾಮಯ್ಯ ಅಗಲಿದ್ದಾರೆ ಎಂದು  ಕೈ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ