ಪೊಲೀಸ್ ಇಲಾಖೆಯನ್ನು ಕೇಸರೀಕರಣಗೊಳ್ಳಲು ಬಿಡುವುದಿಲ್ಲ: ಶಿವಕುಮಾರ್

ಬುಧವಾರ, 24 ಮೇ 2023 (12:29 IST)
ಬೆಂಗಳೂರು : ಪೊಲೀಸ್ ಇಲಾಖೆಯನ್ನು ಕೇಸರೀಕರಣಗೊಳ್ಳಲು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
 
ವಿಧಾನಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಅಧಿಕಾರಿಗಳಿಗೆ ಡಿಸಿಎಂ ಕ್ಲಾಸ್ ತೆಗೆದುಕೊಂಡಿದ್ದಾರೆ. ಇಷ್ಟು ದಿನ ಪೊಲೀಸರು ಬಿಜೆಪಿ ಪರ ಕೆಲಸ ಮಾಡಿದ್ದು ಗೊತ್ತಿದೆ. ನಾಲ್ಕು ವರ್ಷಗಳ ನಿಮ್ಮ ವರ್ತನೆಗಳು ನಮಗೆ ತಿಳಿದಿದೆ. ಇನ್ನಾದರೂ ಉತ್ತಮ ಕೆಲಸ ಮಾಡಿ ಎಂದು ಗರಂ ಆಗಿದ್ದಾರೆ. 

ಸಿದ್ದರಾಮಯ್ಯರ ಜೊತೆ ಪೊಲೀಸರು ನಡೆದುಕೊಂಡ ರೀತಿ ತಿಳಿದಿದೆ. ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದರೂ ಕೇಸ್ ಹಾಕಿಲ್ಲ. ನಿಮ್ಮ ಕೆಲಸಗಳನ್ನು ಚೆನ್ನಾಗಿ ಗಮನಿಸಿದ್ದೇವೆ ಇನ್ನೂ ಇದೆಲ್ಲ ನಡೆಯುವುದಿಲ್ಲ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ