ಪೊಲೀಸ್ ದೌರ್ಜನ್ಯ: ವಾಟಾಳ್ ನಾಗರಾಜ್ ಆಕ್ರೋಶ

ಶುಕ್ರವಾರ, 5 ಆಗಸ್ಟ್ 2016 (16:40 IST)
ಯಮನೂರಿನಲ್ಲಿ ಪೊಲೀಸರಿಂದ ಅಮಾಯಕರ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಕೃತ್ಯ ಅಮಾನವೀಯ ಹಾಗೂ ಅಕ್ಷಮ್ಯ ಅಪರಾಧ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರಿಗೆ ಭೇಟಿ ನೀಡಿದ ಅವರು, ಯಮನೂರಿನಲ್ಲಿ ಪೊಲೀಸರು ಯಮನಂತೆ ವರ್ತಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಬಂಧಿತ ರೈತರ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. 
 
ಯಮನೂರಿನಲ್ಲಿ ಪೊಲೀಸರು ಕಲ್ಲಿನಿಂದ ಹೊಡೆದು ಅಮಾಯಕರ ಮನೆ ಬಾಗಿಲುಗಳನ್ನು ಧ್ವಂಸಗೊಳಿಸಿ ಅಟ್ಟಹಾಸ ಮೆರೆದಿದ್ದಾರೆ. ಪೊಲೀಸರು ಬಳಸಿರುವ ಕಲ್ಲನ್ನು ತೆಗೆದುಕೊಂಡು ಮುಖ್ಯಮಂತ್ರಿಯವರಿಗೆ ತೋರಿಸುತ್ತೇನೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ