ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ: ಮೇಘರಿಕ್‌ಗೆ ನೋಟಿಸ್ ಜಾರಿ

ಶುಕ್ರವಾರ, 19 ಆಗಸ್ಟ್ 2016 (16:07 IST)
ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಕುರಿತು ವಿವರಣೆ ನೀಡುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಮಂಜುಳಾ ಮಾನಸ ಅವರು ಬೆಂಗಳೂರು ಪೊಲೀಸ್ ಆಯುಕ್ತ ಎನ್‌.ಎಸ್.ಮೇಘರಿಕ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
 
ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ ಪ್ರಕರಣವನ್ನು ಖಂಡಿಸಿ ಅಮ್ನೆಸ್ಟಿ ಇಂಡಿಯಾ ಸಂಸ್ಥೆಯ ವಿರುದ್ಧ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರನ್ನು ಎಳದಾಡಿ ಮನ ಬಂದಂತೆ ತಳ್ಳಿಸಿದ್ದಾರೆ. ವಿದ್ಯಾರ್ಥಿನಿಯರನ್ನು ಮಹಿಳಾ ಪೊಲೀಸರೇ ಮುಟ್ಟಬೇಕು. ಈ ಕುರಿತು ಸ್ಪಷ್ಟವಾದ ವಿವರಣೆ ನೀಡಿ ಎಂದು ನೋಟಿಸ್ ನೀಡಲಾಗಿದೆ.
 
ವಸಂತನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಅಮ್ನೆಸ್ಟಿ ಇಂಡಿಯಾ ಸಂಸ್ಥೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಕಾಶ್ಮೀರಿ ಪಂಡಿತರಿಗೆ ಭಾರತೀಯ ಸೇನೆಯಿಂದ ತೊಂದರೆಯಾಗುತ್ತಿದೆ. ಸೇನೆಯಿಂದ ಸ್ವಾತಂತ್ರ್ಯ ಬೇಕು ಎಂದು ಆಗ್ರಹಿಸಿ ಕೆಲವರು ಭಾರತೀಯ ಸೇನೆಯ ವಿರುದ್ಧ ಘೋಷಣೆ ಕೂಗಿದ್ದರು.
 

ವೆಬ್ದುನಿಯಾವನ್ನು ಓದಿ