ಮಹದಾಯಿ ಹೋರಾಟಗಾರರ ಮೇಲೆ ಪೊಲೀಸ್ ದೌರ್ಜನ್ಯ: ಮಹಿಳಾ ಆಯೋಗ ಆಕ್ರೋಶ

ಶನಿವಾರ, 30 ಜುಲೈ 2016 (13:32 IST)
ಧಾರವಾಡ ಪೊಲೀಸರಿಂದ ಮಹದಾಹಿ ಹೋರಾಟಗಾರರ ಮೇಲಿನ ಅಮಾನವೀಯ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಿತಿಮೀರಿ ವರ್ತಿಸುವುದು ಸರಿಯಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ವಿಷಾದ ವ್ಯಕ್ತಪಡಿಸಿದ್ದಾರೆ.
 
ಪೊಲೀಸರು ಮಹಿಳೆಯರು ಹಾಗೂ ಮಕ್ಕಳ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಪೊಲೀಸರ ವರ್ತನೆ ಕುರಿತು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೊಂದಿಗೆ ಚರ್ಚಿಸಿದ್ದೇನೆ. ಪ್ರತಿಭಟನಾ ನಿರತರು ಹಾಗೂ ರೈತರ ಮೇಲೆ ಹಲ್ಲೆ ನಡೆಸದಂತೆ ನಿರ್ದೇಶನ ನೀಡಿ ಎಂದು ಕೇಳಿಕೊಂಡಿದ್ದೇನೆ ಎಂದು ತಿಳಿಸಿದರು.
 
ಅಮಾಯಕರು, ಮಹಿಳೆಯರು ಹಾಗೂ ಮಕ್ಕಳ ಮೇಲೆ ಹಲ್ಲೆ ನಡೆಸುವುದನ್ನು ಯಾರು ಸಹ ಒಪ್ಪುವುದಿಲ್ಲ. ಈ ಕುರಿತು ಧಾರವಾಡ ಎಸ್‌ಪಿ ಅವರೊಂದಿಗೆ ಮಾತನಾಡಿದ್ದೇನೆ. ಹಲ್ಲೆಗೆ ಸಂಬಂಧಿಸಿದಂತೆ ಸೂಕ್ತ ವರದಿ ನೀಡುವಂತೆ ತಿಳಿಸಿದ್ದೇನೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ