ವೀಸಾ ಮುಗಿದ ಆಫ್ರಿಕಾ ವಿದ್ಯಾರ್ಥಿಗಳ ಹುಡುಕಾಟದಲ್ಲಿ ಪೊಲೀಸರು

ಗುರುವಾರ, 26 ಮಾರ್ಚ್ 2015 (17:16 IST)
ನಗರದ ಅನೇಕ ಭಾಗಗಳಲ್ಲಿ ಆಫ್ರಿಕಾ ವಿದ್ಯಾರ್ಥಿಗಳು ವೀಸಾ ಅವಧಿ ಮುಕ್ತಾಯಗೊಂಡಿದ್ದರೂ ಅನಧಿಕೃತವಾಗಿ ವಾಸ ಮಾಡುತ್ತಿದ್ದು, ಅಂತಹ ವಿದ್ಯಾರ್ಥಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.

ಕಳೆದ ಎರಡು ವಾರಗಳ ಹಿಂದೆ ಪಬ್‌ನಲ್ಲಿ ನಡೆದ ಹೊಡೆದಾಟದಲ್ಲಿ ಆಫ್ರಿಕಾದ ವಿದ್ಯಾರ್ಥಿಗಳಿಗೆ ಸ್ಥಳೀಯರು ಮನಬಂದಂತೆ ಥಳಿಸಿದ್ದರು.ಆದರೆ, ವೀಸಾ ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪೊಲೀಸರಿಗೆ ದೂರು ನೀಡಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ.

ಬೆಂಗಳೂರು ಪಶ್ಚಿಮದ ಹೆಚ್ಚುವರಿ ಆಯುಕ್ತ ಪಿ.ಹರಿಕೃಷ್ಣನ್ ಮಾತನಾಡಿ, ಆಫ್ರಿಕಾ ಖಂಡದ ಅಂಗೋಲಾ ಮೂಲದ ಇಬ್ಬರು ವಿದ್ಯಾರ್ಥಿಗಳ ವೀಸಾ ಅವಧಿ ಮುಗಿದಿದ್ದರೂ ನಗರದಲ್ಲಿ ವಾಸವಾಗಿದ್ದಾರೆ. ವಿದ್ಯಾರ್ಥಿಗಳ ಹುಡುಕಾಟಕ್ಕೆ ತಂಡ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ