ಪೊಲೀಸರೇ ನೀವು ತೊಟ್ಟಿರುವುದು ಖಾಕಿಯಾ? ಹಾಗಾದ್ರೆ ಸಿಎಂ, ಜಾರ್ಜ್ ವಿರುದ್ಧ ಕ್ರಮಕೈಗೊಳ್ಳಿ: ಕರಂದ್ಲಾಜೆ

ಶನಿವಾರ, 7 ಅಕ್ಟೋಬರ್ 2017 (16:30 IST)
ಪೊಲೀಸರೇ ನೀವು ತೊಟ್ಟಿರುವುದು ಖಾಕಿಯಾ? ಹಾಗಾದ್ರೆ ಸಿಎಂ ಸಿದ್ದರಾಮಯ್ಯ, ಕೆ.ಜೆ. ಜಾರ್ಜ್ ವಿರುದ್ಧ ಕ್ರಮಕೈಗೊಳ್ಳಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಗುಡುಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರಗೆ ಸೇರಿದ ಕಂಪೆನಿಗೆ ಅಕ್ರಮವಾಗಿ ಭೂಮಿ ಮಂಜೂರಾತಿ ಮಾಡಿರುವ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.
 
ಬಿಜೆಪಿ ಮುಖಂಡ ಬಿ.ಜೆ.ಪುಟ್ಟಸ್ವಾಮಿ ಮಾಡಿದ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಮತ್ತು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ. ಜಾರ್ಜ್ ಉತ್ತರಿಸಬೇಕಾಗುತ್ತದೆ ಎಂದು ಕಿಡಿಕಾರಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಮತ್ತು ಅವರ ಪುತ್ರ ಡಾ.ಯತೀಂದ್ರ ಹಾಗೂ ಸಂಪುಟದ ಸಚಿವರು , ಶಾಸಕರು ವ್ಯಾಪಕ ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಎಚ್ಚರಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ