ಗೌರಿ ಲಂಕೇಶ್ ಹಂತಕರ ಪತ್ತೆಗೆ ಪೊಲೀಸರ ತಂತ್ರ
ಈ ನಡುವೆ ಗೌರಿ ಲಂಕೇಶ್ ಹತ್ಯೆ ಕುರಿತಾಗಿ ಪ್ರತಿಭಟನೆ ನಡೆಸುತ್ತಿರುವ ವಿಚಾರವಾದಿ ನಾಯಕರು ಹಂತಕರ ಬಂಧನಕ್ಕೆ ಒತ್ತಾಯಿಸಿದ್ದಾರೆ. ಇನ್ನೊಂದೆಡೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ನಟ ಚೇತನ್, ಗೌರಿ ಲಂಕೇಶ್ ಹತ್ಯೆ ಒಂದು ಭಯೋತ್ಪಾದಕ ಕೃತ್ಯ. ಗೌರಿ ಲಂಕೇಶ್ ರಿಂದ ಹಲವು ವಿಚಾರಗಳನ್ನು ಕಲಿತಿದ್ದೇನೆ. ನಮಗೆ ನ್ಯಾಯ ಬೇಕು. ಹಂತಕರನ್ನು ಶೀಘ್ರದಲ್ಲೇ ಬಂಧಿಸಿ ಎಂದು ಒತ್ತಾಯಿಸಿದ್ದಾರೆ.