ಬೆಂಗಳೂರು ಅವಾರ್ಡ್ ನಿರಾಕರಿಸಿದ ಪೊಲೀಸ್ ಅಧಿಕಾರಿ ಡಿ ರೂಪಾ
ನಮ್ಮ ಬೆಂಗಳೂರು ಫೌಂಡೇಶನ್ ಎಂಬ ಖಾಸಗಿ ಸಂಸ್ಥೆ ಈ ಪ್ರಶಸ್ತಿಗೆ ರೂಪಾ ಅವರನ್ನು ಆಯ್ಕೆ ಮಾಡಿತ್ತು. ಆದರೆ ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡಗಳನ್ನು ಬಯಲಿಗೆಳೆದ ಹೆಮ್ಮೆಯ ಪೊಲೀಸ್ ಅಧಿಕಾರಿ ಈ ಪ್ರಶಸ್ತಿ ಸ್ವೀಕರಿಸಲ್ಲ ಎಂದಿದ್ದಾರೆ.
‘ಒಬ್ಬ ಪೊಲೀಸ್ ಅಧಿಕಾರಿಯಾಗಿ ಈ ಪ್ರಶಸ್ತಿ ಸ್ವೀಕರಿಸಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ. ಈ ಪ್ರಶಸ್ತಿ ಜತೆಗೆ ಭಾರೀ ಮೊತ್ತದ ನಗದು ಬಹುಮಾನವಿರುವ ಕಾರಣಕ್ಕೆ ಪ್ರಶಸ್ತಿ ಸ್ವೀಕರಿಸಲ್ಲ. ಎಲ್ಲಾ ಸರ್ಕಾರಿ ಅಧಿಕಾರಿಗಳೂ ಇಂತಹ ಸಂಘಟನೆಗಳಿಂದ ಸ್ವಲ್ಪ ದೂರವೇ ಇರುವುದು ಅಥವಾ ತಟಸ್ಥವಾಗಿರುವುದು ಒಳ್ಳೆಯದು ಎಂಬ ಕಾರಣಕ್ಕೆ ಪ್ರಶಸ್ತಿ ಸ್ವೀಕರಿಸಲ್ಲ’ ಎಂದು ರೂಪಾ ಹೇಳಿದ್ದಾರೆ.