ಪೊಲೀಸ್ ಪ್ರತಿಭಟನೆ: ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್ ಬಂಧನ

ಗುರುವಾರ, 2 ಜೂನ್ 2016 (11:45 IST)
ರಾಜ್ಯಾದ್ಯಂತ ಜೂನ್ 4 ರಂದು ಪೊಲೀಸ್ ಪ್ರತಿಭಟನೆಗೆ ಕರೆ ನೀಡಿದ್ದ ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್ ಅವರನ್ನು ನಿನ್ನೆ ಬಂಧಿಸಲಾಗಿದೆ.
 
ರಾಜ್ಯ ಪೊಲೀಸರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜೂನ್ 4 ರಂದು ರಾಜ್ಯ ಪೊಲೀಸರು ಸಾಮೂಹಿಕ ರಜೆ ಹಾಕುವ ಮೂಲಕ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಶಶಿಧರ್ ಕರೆ ನೀಡಿದ್ದರು.
 
ಪೊಲೀಸರು ನಿನ್ನೆ ತಡರಾತ್ರಿ ಶಶಿಧರ್ ಅವರನ್ನು ಅವರ ಸ್ವಗ್ರಹದಿಂದ ಬಂಧಿಸಿ ನ್ಯಾಯಮೂರ್ತಿಗಳ ಎದುರು ಹಾಜರುಪಡಿಸಲಾಗಿದ್ದು ನ್ಯಾಯಾಲಯ 14 ದಿನಗಳವರೆಗೂ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಇದೀಗ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅವರು ನಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ನಿಲ್ಲಿಸಲ್ಲ ಎಂದು ಪಟ್ಟು ಹಿಡಿದಿದ್ದಾರೆ.
 
ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್ ಅವರಿಗೆ ಬಿಪಿ, ಶುಗರ್ ಇರುವುದರಿಂದ ಜೈಲು ಸಿಬ್ಬಂದಿಗಳು ಅವರಿಗೆ ಅಹಾರ ನೀಡಲು ಹರಸಾಹಸ ಪಡುತ್ತಿದ್ದಾರೆ. ಆದರೆ, ಅವರು ಬೇಡಿಕೆ ಈಡೇರುವವರೆಗೂ ಆಹಾರ ಸ್ವೀಕರಿಸುವುದಿಲ್ಲ ಎಂದು ಪಟ್ಟು ಹಿಡಿದು ಜೈಲಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ