ರಾಜ್ಯಾದ್ಯಂತ ಪೊಲೀಸ್ ಪ್ರತಿಭಟನೆ: ನೀರಸ ಪ್ರತಿಕ್ರಿಯೆ

ಶನಿವಾರ, 4 ಜೂನ್ 2016 (10:42 IST)
ರಾಜ್ಯಾದ್ಯಂತ ಭಾರಿ ಸುದ್ದಿ ಮಾಡಿರರುವ ಪೊಲೀಸ ಸಾಮೂಹಿಕ ಪ್ರತಿಭಟನೆಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
 
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪೊಲೀಸ್ ಮಹಾ ಸಂಘದ ಅಧ್ಯಕ್ಷ ಶಶಿಧರ್ ಅವರು ಇಂದು ರಾಜ್ಯಾದ್ಯಂತ ಪೊಲೀಸರು ಸಾಮೂಹಿಕವಾಗಿ ರಜೆ ಹಾಕುವ ಮೂಲಕ ಪ್ರತಿಭಟನೆಗೆ ಕರೆ ನೀಡಿದ್ದರು. ಈ ಪ್ರತಿಭಟನೆಗೆ ಸಾಕಷ್ಟು ಪರ ವಿರೋಧ ಚರ್ಚೆಯಾಗಿತ್ತು.
 
ಸಾಕಷ್ಟು ಸಂಘ ಸಂಸ್ಥೆಗಳು ಪ್ರತಿಭಟನೆಗೆ ಸಾಥ ನೀಡಿದ್ದರು ಸಹ ಇಂದು ಪೊಲೀಸರ ಪ್ರತಿಭಟನೆಗೆ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಂದಿನಂತೆ ಪೊಲೀಸರು ಕರ್ತವ್ಯಕೆ ಹಾಜರಾಗಿದ್ದಾರೆ.
 
ರಾಜ್ಯದ ಇತಿಹಾಸದಲ್ಲಿ ಪ್ರಪ್ರಥಮ ಭಾರಿಗೆ ಪೊಲೀಸರು ಕೈಗೊಂಡಿದ್ದ ಪ್ರತಿಭಟನೆಯನ್ನು ರಾಜ್ಯ ಸರಕಾರ ಹತ್ತಿಕ್ಕಲು ಪ್ರಯತ್ನಿಸಿದ್ದು, ಕಳೆದ ಎರಡು ದಿನದ ಹಿಂದೆ ಪ್ರತಿಭಟನೆಗೆ ಕರೆ ನೀಡಿದ್ದ ಶಶಿಧರ್ ಅವರನ್ನು ಬಂಧಿಸಿ 14 ದಿನಗಳವರೆಗೂ ನ್ಯಾಯಾಂಗ ವಶಕ್ಕೆ ಪಡೆಯಲಾಗಿತ್ತು.
 
ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್, ಪೊಲೀಸ್ ಕ್ವಾಟರ್ಸ್‌ನಲ್ಲಿರುವ ಪೊಲೀಸ್ ಕುಟುಂಬಗಳು ಪ್ರತಿಭಟನೆಯಲ್ಲಿ ಭಾಗಿಯಾದರೆ ಅವರ ಕ್ವಾಟರ್ಸ್‌ನ್ನು ಖಾಲಿ ಮಾಡಿಸುವುದಲ್ಲದೇ ಅವರನ್ನು ಸೇವೆಯಿಂದ ವಜಾಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ