ಪೊಲೀಸ್ ಠಾಣೆ ಮುಂದೆ ಪೊಲೀಸರೇ ಪ್ರತಿಭಟನೆ ಮಾಡಿರುವ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣೆ ಬಳಿ ಘಟನೆ ನಡೆದಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಮೇಲೆ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧವಿತ್ತು. ಕೆಕೆ ಕೊಪ್ಪ ಕ್ರಾಸ್ ಬಳಿ ರಸ್ತೆಯಲ್ಲಿ ಸಂಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುಂದಾದರು. ಆದರೆ ಕಾಂಗ್ರೆಸ್ ಕಾರ್ಯರ್ಕರಿಗೆ ರಾಷ್ಟ್ರೀಯ ಹೆದ್ದಾರಿ ಮೇಲೆ ಪ್ರಯಾಣ ಬೆಳಸಂತೆ ಪೊಲೀಸರು ತಡೆದಿದ್ದರು.
ಈ ವೇಳೆ ಪೊಲೀಸರನ್ನು ಕಾಂಗ್ರೆಸ್ ಮುಖಂಡರು ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದರು. ಆದರೆ ಪೊಲೀಸರಿಗೆ ನಿಂದಿಸಿದ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರೂ ಪ್ರಯೋಜನ ಆಗಿರಲಿಲ್ಲ.
ಪ್ರಭಾವಿ ರಾಜಕಾರಣಿಗಳ ಮಣಿದು ದೂರು ದಾಖಲಿಸಿದ ಸಿಪಿಐ ವಿರುದ್ಧ ಆಕ್ರೋಶ ಕೇಳಿಬಂದಿತ್ತು.
ಠಾಣಾ ಸಿಬ್ಬಂದಿಯಿಂದ ಪೊಲೀಸ್ ಠಾಣೆಯ ಮುಂದೆ ಧರಣಿ ನಡೆದ ಮೇಲೆ ಕಡೆಗೂ ನಾಲ್ವರ ಮೇಲೆ ಪ್ರಕರಣ ದಾಖಲಿಸಲಾಗಿದೆ.