ಯಡಿಯೂರಪ್ಪ ಪಿಎ ಸಂತೋಷ್ ಬಂಧನಕ್ಕೆ ಬಲೆ ಬೀಸಿದ ಪೊಲೀಸರು
ಬಿಜೆಪಿ ಮುಖಂಡ ಈಶ್ವರಪ್ಪ ಪಿಎ ವಿನಯ್ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಯಡಿಯೂರಪ್ಪ ಪಿಎ ಸಂತೋಷ್ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.
ಇತ್ತ, ಬಂಧನ ಭೀತಿ ಎದುರಿಸುತ್ತಿರುವ ಬಿಎಸ್`ವೈ ಪಿಎ ಸಂತೋಷ್ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ನವದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ರಾಜಕೀಯ ಉದ್ದೇಶದಿಂದ ನನ್ನ ಪಿಎ ಸಂತೋಷ್ ಬಂಧನಕ್ಕೆ ಷಡ್ಯಂತ್ರ ನಡೆಯುತ್ತಿದೆ. ಸರ್ಕಾರದ ವಿರುದ್ಧ ನಾನು ಟೀಕೆ ಮಾಡುತ್ತಿರುವುದರಿಂದ ನಿರಪರಾಧಿಯಾದ ಸಂತೋಷ್ ಬಂಧನಕ್ಕೆ ಮುಂದಾಗಿದ್ದಾರೆ. ಸಂತೋಷ್`ಗಾಗಿ ನನ್ನ ಮನೆಗೂ ಆಗಮಿಸಿದ್ದ ಪೊಲೀಸರು ಹುಡುಕಾಟ ನಡೆಸಿದ್ದರು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.