ಮಲ್ಲೇಶ್ವರ ಬಿಜೆಪಿ ಕಚೇರಿಗೆ ಪೊಲೀಸ್​ ಭದ್ರತೆ

ಸೋಮವಾರ, 10 ಏಪ್ರಿಲ್ 2023 (16:15 IST)
ಇಂದು ಬಿಜೆಪಿ ಟಿಕೆಟ್​ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ರಾಜ್ಯ ಬಿಜೆಪಿ ನಾಯಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಹೀಗಾಗಿ ಬೆಂಗಳೂರಿನ ಮಲ್ಲೇಶ್ವರ ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.. ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದ್ದು, ತಮ್ಮ ಬೆಂಬಲಿಗರಿಗೆ ಟಿಕೆಟ್​ ಮಿಸ್​ ಆದ್ರೆ ಗಲಾಟೆ ಮಾಡುವ ಸಾಧ್ಯತೆಯಿದೆ.. ಹೀಗಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರ ನಿಯೋಜನೆ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ