ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆದ ಪೊಲೀಸರು
ಉಜಿರೆಯ ತಿಮರೋಡಿ ನಿವಾಸಕ್ಕೆ ಪೊಲೀಸರು ಬಂದಿದ್ದರು. ಉಡುಪಿ ಎಎಸ್ ಪಿ ಸುಧಾಕರ್ ನಾಯಕ್ ನೇತೃತ್ವದ ತಂಡ ನಿವಾಸಕ್ಕೆ ಬಂದು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಈ ವೇಳೆ ಹೈ ಡ್ರಾಮಾ ನಡೆದಿದೆ. ಗಿರೀಶ್ ಮಟ್ಟೆಣ್ಣನವರ್ ಪೊಲೀಸರಿಗೆ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
ನಿನ್ನೆಯೇ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಪೊಲೀಸರು ಇಂದು ಅವರನ್ನು ವಶಕ್ಕೆ ಪಡೆಯಲು ಖುದ್ದಾಗಿ ಮನೆಗೆ ಬಂದಿದ್ದಾರೆ.
ಈ ವೇಳೆ ಗಿರೀಶ್ ಮಟ್ಟೆಣ್ಣನವರ್ ಸಹಿತ ಮಹೇಶ್ ಶೆಟ್ಟಿ ಬೆಂಬಲಿಗರು ಅವರನ್ನು ತಡೆದಿದ್ದಾರೆ. ಬಳಿಕ ಅವರನ್ನು ಪೊಲೀಸರು ತಮ್ಮ ವಾಹನದಲ್ಲಿ ಕರೆದೊಯ್ದರು. ಈ ವೇಳೆ ನನ್ನ ಜೀವಕ್ಕೆ ಏನಾದರೂ ಆದರೆ ಸರ್ಕಾರವೇ ಕಾರಣವಾಗುತ್ತದೆ ಎಂದು ಮಹೇಶ್ ಶೆಟ್ಟಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.