ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಪೊಲೀಸರನ್ನು ವಜಾ ಮಾಡಿ: ಸಿಎಂ ಆದೇಶ

ಶುಕ್ರವಾರ, 3 ಜೂನ್ 2016 (12:54 IST)
ವಿವಿಧ ಬೇಡಿಕೆ ಈಡೇರಿಸುವಂತೆ ನಾಳೆ ರಾಜ್ಯಾದ್ಯಂತ ನಡೆಯುವ ಪೊಲೀಸರ ಪ್ರತಿಭಟನೆಗೆ ಬ್ರೇಕ್ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
 
ರಾಜ್ಯಾದ್ಯಂತ ಪೊಲೀಸರು ಪ್ರತಿಭಟನೆ ನಡೆಸಿದರೆ ರಾಜ್ಯ ಸರಕಾರಕ್ಕೆ ಕಪ್ಪು ಚುಕ್ಕಿಯಾಗುತ್ತದೆ. ನಾಳೆ ಯಾವುದೇ ಕಾರಣಕ್ಕೂ ಪೊಲೀಸರು ಧರಣಿಯಲ್ಲಿ ನಡೆಸದಂತೆ ನಿಗಾ ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಜಿ ಮತ್ತು ಐಜಿಪಿ ಅವರಿಗೆ ಸೂಚನೆ ನೀಡಿದ್ದಾರೆ.
 
ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಸಾಕಷ್ಟು ಜವಾಬ್ದಾರಿ ಹೊಂದಿರುವ ಇಲಾಖೆಯಾಗಿದೆ. ನಾಳೆ ಅವರು ಸಾಮೂಹಿಕ ರಜೆ ಹಾಕುವ ಮೂಲಕ ಪ್ರತಿಭಟನೆ ನಡೆಸುವುದನ್ನು ತಡೆಯ ಬೇಕಾಗಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಲು ಯಾವುದೇ ಪೊಲೀಸರು ರಜೆ ಹಾಕಿದರೆ ಅವರ ವಿರುದ್ಧ ನಿರ್ದಾಕ್ಷಿನ ಗ್ರಮ ಕೈಗೊಂಡು ಅವರನ್ನು ಸೇವೆಯಿಂದ ವಜಾಗೊಳಿಸಿ ಎಂದು ಮುಖ್ಯಮಂತ್ರಿಯವರು ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ