ಯೋಗೇಶ್ವರ್ ಕೈಹಿಡಿದ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಬಿರುಸು: ನಿಖಿಲ್‌ ಕುಮಾರಸ್ವಾಮಿ ಹೇಳಿದ್ದೇನು

Sampriya

ಬುಧವಾರ, 23 ಅಕ್ಟೋಬರ್ 2024 (14:20 IST)
Photo Courtesy X
ಬೆಂಗಳೂರು: ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಅವರು ಕಾಂಗ್ರೆಸ್‌ ಕೈಹಿಡಿದ ಬೆನ್ನಲ್ಲೇ ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರಿದೆ. ಕಾಂಗ್ರೆಸ್‌ನಿಂದ ಯೋಗೇಶ್ವರ್‌ ಕಣಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ. ಮೈತ್ರಿ ಅಭ್ಯರ್ಥಿಗೆ ಕಸರತ್ತು ಮುಂದುವರಿದಿದೆ.

ಯೋಗೇಶ್ವರ್ ಬಿಜೆಪಿಗೆ ರಾಜೀನಾಮೆ ಬೆನ್ನಲ್ಲೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಕರೆ ಮಾಡಿ ತಕ್ಷಣ ಬರುವಂತೆ ಸೂಚಿಸಿ, ಚರ್ಚೆ ನಡೆಸಿದರು.

ಈ ವೇಳೆ ಪ್ರತಿಕ್ರಿಯಿಸಿದ ನಿಖಿಲ್‌, ರಾಜಕೀಯದ ಬೆಳವಣಿಗೆಗಳ ಬಗ್ಗೆ ದೇವೇಗೌಡರು ಚರ್ಚಿಸಿದ್ದಾರೆ, ಇಂದು ಸಂಜೆ ಚನ್ನಪಟ್ಟಣ ಅಭ್ಯರ್ಥಿ ಯಾರು ತಿಳಿಯಲಿದೆ. ದೇವೇಗೌಡರು, ಕುಮಾರಣ್ಣ ಅದನ್ನ ಬಹಿರಂಗ ಮಾಡಲಿದ್ದಾರೆ ಎಂದರು.

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದು ಆಶ್ಚರ್ಯ ತಂದಿಲ್ಲ. ಅಷ್ಟೇ ಅಲ್ಲ, ಚನ್ನಪಟ್ಟಣದಲ್ಲಿ ಕಳೆದ ಎರಡು ತಿಂಗಳಿಂದ ನಿರಂತರವಾಗಿ ನನ್ನ ಹೆಸರು ಚಾಲ್ತಿಯಲ್ಲಿದೆ ಅಂತಾನೂ ಹೇಳಿದ್ದಾರೆ. ಈ ಮಧ್ಯೆ ಚನ್ನಪಟ್ಟಣಕ್ಕೆ ಸಂಸದ ಡಾಕ್ಟರ್ ಮಂಜುನಾಥ್ ಅವರ ಪತ್ನಿ ಅನಸೂಯ ಅವರ ಹೆಸರು ಚರ್ಚೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ನಿಖಿಲ್ ಕಾದು ನೋಡಿ ಎಂದಷ್ಟೇ ಹೇಳಿದ್ದಾರೆ.

ಆದರೆ, ಚನ್ನಪಟ್ಟಣ ಉಪಚುನಾವಣೆಯಲ್ಲಿ ಅನುಸೂಯ ಸ್ಪರ್ಧಿಸುತ್ತಾರೆ ಎನ್ನುವುದು ಸುಳ್ಳು ಎಂದು ಅವರ ಪತಿ, ಸಂಸದ ಡಾ.ಸಂಸದ ಡಾ ಮಂಜುನಾಥ್, ಸ್ಪಷ್ಟಪಡಿಸಿದ್ದಾರೆ. ಕೊನೆ ಕ್ಷಣದಲ್ಲಿ ಅನಸೂಯ ಅವರನ್ನೇ ಕಣಕ್ಕಿಳಿಸಿದರೂ ಅಚ್ಚರಿಪಡಬೇಕಿಲ್ಲ. ಜೊತೆಗೆ ಅನಿತಾ ಕುಮಾರಸ್ವಾಮಿ ಅವರ ಹೆಸರು ಸಹ ಕೇಳಿಬರುತ್ತಿದೆ.

ದೇವೇಗೌಡರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ, ರಾಜಕೀಯದ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ, ಇಂದು ಸಂಜೆ 7 ಗಂಟೆಗೆ ಚನ್ನಪಟ್ಟಣ ಅಭ್ಯರ್ಥಿ ಯಾರು ತಿಳಿಯಲಿದೆ. ದೇವೇಗೌಡರು, ಕುಮಾರಣ್ಣ ಅದನ್ನ ಬಹಿರಂಗ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಮತ್ತೊಂದೆಡೆ ಚನ್ನಪಟ್ಟಣದ ಬೆಳವಣಿಗೆ ಬಗ್ಗೆ ಕುಮಾರಸ್ವಾಮಿ ಬಿಜೆಪಿ ಹೈಕಮಾಂಡ್​ಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ, ಇಂದು ಚನ್ನಪಟ್ಟಣ ಮುಖಂಡರ ಸಭೆ ಕರೆದಿದ್ದು, ಸಭೆಯಲ್ಲಿ ಅಭ್ಯರ್ಥಿ ಘೋಷಣೆ ಮಾಡುವ ಸಾಧ್ಯತೆ ಇದೆ. ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡಬೇಕೆನ್ನುವ ಚರ್ಚೆಯೂ ಇದೆ. ಹೀಗಾಗಿ ಚನ್ನಪಟ್ಟಣ ತಾಲೂಕು ಘಟಕದ ಜೆಡಿಎಸ್ ಅಧ್ಯಕ್ಷ ಜಯಮುತ್ತು ಅವರ ಹೆಸರು ಕೂಡಾ ಕೇಳಿ ಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ