ರಾಜಕೀಯ ಚೆಲ್ಲಾಟ: ಮಹಾದಾಯಿ ಮಧ್ಯಂತರ ಅರ್ಜಿ ತಿರಸ್ಕರಿಸಿದ ಕೋರ್ಟ್

ಬುಧವಾರ, 27 ಜುಲೈ 2016 (15:26 IST)
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಲ್ಲಿಸಿದ ಮಧ್ಯಂತರ ಅರ್ಜಿಯನ್ನು ನ್ಯಾಯಧೀಶರು ತಿರಸ್ಕರಿಸಿದ್ದಾರೆ.
 
ಮಹದಾಯಿ ನದಿಯಿಂದ ಮಲಪ್ರಭಾ ನದಿಗೆ 7.5 ಟಿಎಂಸಿ ಕುಡಿಯುವ ನೀರು ಬಿಡುವಂತೆ ಕೋರಿ ಕರ್ನಾಟಕ ಸರಕಾರ ಮಧ್ಯಂತರ ಅರ್ಜಿಯನ್ನು ಸಲ್ಲಿಸಿತ್ತು. ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಪರವಾಗಿ ಹಿರಿಯ ವಕೀಲರಾದ ನಾರಿಮನ್ ಅವರು ವಾದ ಮಂಡಿಸಿದ್ದರು. 
 
ಕರ್ನಾಟಕ ರಾಜ್ಯಕ್ಕೆ 7.5 ಟಿಎಂಸಿ ನೀರು ಬಿಡಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರಾದ ಜೆ.ಎಂ.ಪಾಂಜಾಲ್ ಅಧ್ಯಕ್ಷತೆಯ ಪೀಠ ಕರ್ನಾಟಕ ಸಲ್ಲಿಸಿದ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬಾರಿ ಹಿನ್ನೆಡೆಯಾಗಿದೆ.
 
ಮಹದಾಯಿ ಟ್ರಿಬುನಲ್ ತೀರ್ಪಿನ ವಿರುದ್ಧ ಭುಗಿಲ್ಲೆದ್ದ ಆಕ್ರೋಶ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕು ದಿಢೀರ್ ಬಂದ್‌ಗೆ ಕರೆ ನೀಡಲಾಗಿದೆ. ತಾಲೂಕಿನ ಜನರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಂಚಿ ಬಂದ್‌ಗೆ ಬೆಂಬಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನವಲಗುಂದ ತಾಲೂಕು ಸಂಪೂರ್ಣ ಸ್ಥಬ್ಧವಾಗಿದೆ. ಹಾಗೂ ನಾಳೆ ಗದಗ್ ಜಿಲ್ಲೆಯ ಗಜೇಂದ್ರಗಡ ಪಟ್ಟಣವನ್ನು ಬಂದ್ ಮಾಡಲು ಹೋರಾಟಗಾರರು ಕರೆ ನೀಡಿದ್ದಾರೆ.
 
ಮಹದಾಯಿ ನದಿ ನೀರು ಹಂಚಿಕೆ ವಿವಾದದಲ್ಲಿ ರಾಜ್ಯದ ವಿರುದ್ಧ ಹುಬ್ಬಳ್ಳಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಹದಾಯಿ ಹೋರಾಟಗಾರರು ಹಾಗೂ ಕನ್ನಡಪರ ಸಂಘಟನೆಗಳು ಬೃಹತ್ ಪ್ರತಿಭಟನೆ ಕೈಗೊಂಡಿದ್ದು, ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 
ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಮಾತನಾಡಿ, ಗೋವಾ ಮತ್ತು ಮಹಾರಾಷ್ಟ್ರದ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದುಕೊಂಡು ಬರಲು ಸಿದ್ದವಾಗಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ವಿಪಕ್ಷ ನಾಯರಕರನ್ನು ಕರೆದುಕೊಂಡಲು ಬರಲು ಸಿದ್ದರಾಗಲಿ ಎಂದು ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ