ರಾಜಕೀಯ ನಾಯಕತ್ವದ ಮೇಲಾಟಕ್ಕೆ ಪಾದಯಾತ್ರೆ ನಡೆಸಿದ್ದಾರೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿ ದ್ದಾರೆ. ಈ ಸಂಬಂಧ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು, ಮೇಕೆದಾಟು ಯೋಜನೆಗೆ ಬೇಕಾದ ವಿಸ್ತೃತ ಯೋಜನಾ ವರದಿ ತಯಾರಿಸಲು ವಿಳಂಬ ಮಾಡಿತು.
ಸಿಲುಕಿರುವ ಸಾವಿರಾರು ಭಾರತೀಯರನ್ನು ಸುರಕ್ಷಿತವಾಗಿ ಕರೆತರುವುದಕ್ಕೆ ಸಲಹೆ- ಸೂಚನೆ ನೀಡುವುದನ್ನು ಬಿಟ್ಟು ಕಾಂಗ್ರೆಸ್ನ ಸಿದ್ದರಾ ಮಯ್ಯ ಅವರಂತಹ ನಾಯಕರು ಬೀದಿಬದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಸುನಿಲ್ ಕುಮಾರ್ ವ್ಯಂಗ್ಯವಾಡಿದರು. ಇನ್ನೂ ಅತಂತ್ರರಾಗಿದ್ದ 3,500 ಭಾರತೀಯರನ್ನು ತಾಯ್ನಾಡಿಗೆ ಕರೆ ತಂದಿದ್ದು, ತೆರವು ಕಾರ್ಯಾಚರಣೆ ಮುಂದುವರಿದಿದೆ. ಈ ಸಂದ ರ್ಭದಲ್ಲಿ ಭಾರತೀಯರೆಲ್ಲ ಒಗ್ಗಟ್ಟು ಪ್ರದರ್ಶಿಸಬೇಕು. ಇದರಲ್ಲೂ ಪಕ್ಷ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಸಚಿವರು ಹೇಳಿದ್ದಾರೆ.