ಕಾವೇರಿ ವಿವಾದದಲ್ಲಿ ಸ್ವಾರ್ಥ ರಾಜಕಾರಣ ಬಿಟ್ಟು ಒಂದಾಗಿ ತೀರ್ಮಾನಕ್ಕೆ ಬನ್ನಿ: ಪೇಜಾವರ್ ಶ್ರೀ

ಶುಕ್ರವಾರ, 16 ಸೆಪ್ಟಂಬರ್ 2016 (17:39 IST)
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕಾಗಿಲ್ಲ ಎಂದು ಮಾಜಿ ಅಡ್ವೋಕೇಟ್ ಜನರಲ್ ಬಿ.ವಿ.ಆಚಾರ್ಯ ನೀಡಿರುವ ಹೇಳಿಕೆ ಕುರಿತು ಸ್ವಾರ್ಥ ರಾಜಕಾರಣ ಬಿಟ್ಟು ಎಲ್ಲ ರಾಜಕೀಯ ಪಕ್ಷಗಳು ಒಂದು ತೀರ್ಮಾನಕ್ಕೆ ಬರಬೇಕು ಎಂದು ಪೇಜಾವರ್ ಶ್ರೀಗಳು ಕರೆ ಕೊಟ್ಟಿದ್ದಾರೆ
 
ಉಡಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಮೀರಬಹುದಾದ ಕುರಿತು ಆಲೋಚನೆ ಮಾಡಿ. ಸ್ವಾರ್ಥದ ರಾಜಕೀಯವನ್ನು ಬಿಟ್ಟು ಒಂದು ತೀರ್ಮಾನಕ್ಕೆ ಬರುವಂತೆ ಜನಪ್ರತಿನಿಧಿಗಳಿಗೆ ಸಲಹೆ ನೀಡಿದ್ದಾರೆ.
 
ಕಾವೇರಿ ವಿಚಾರದಲ್ಲಿ ರಾಜ್ಯದ ಜನತೆಯ ಹಿತ ಮುಖ್ಯವಾಗಿದ್ದು, ರಾಜಕೀಯ ಪಕ್ಷಗಳು ಒಮ್ಮತದ ನಿರ್ಧಾರ ಕೈಗೊಳ್ಳಬೇಕು ಎಂದರು.
 
ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳಲ್ಲಿ ಆಕ್ರೋಶ ಭುಗಿಲೆಳುತ್ತಿದೆ. ಹೋರಾಟಗಾರರು ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕು. ಪ್ರತಿಭಟನೆಯ ಹೆಸರಿನಲ್ಲಿ ಹಿಂಸೆ ಘರ್ಷಣೆಗೆ ಅವಕಾಶ ನೀಡದೇ ನಮ್ಮ ಘನತೆ ಗೌರವವನ್ನು ಕಾಪಾಡಿಕೊಳ್ಳೋಣ ಎಂದು ಪೇಜಾವರ್ ಶ್ರೀಗಳು ಮನವಿ ಮಾಡಿಕೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ