ಧರ್ಮದ ಆಧಾರದಲ್ಲಿ ಮತಯಾಚನೆ: ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್‌ ದಾಖಲು

Sampriya

ಶುಕ್ರವಾರ, 26 ಏಪ್ರಿಲ್ 2024 (17:26 IST)
Photo Courtesy Facebook
ಬೆಂಗಳೂರು: ಧರ್ಮದ ಆಧಾರದಲ್ಲಿ ಮತಯಾಚನೆ ಮಾಡಿದಕ್ಕೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಎಕ್ಸ್‌ ಖಾತೆಯಲ್ಲಿ ತೇಜಸ್ವಿ ಸೂರ್ಯ ಅವರು  ಧರ್ಮದ ಆಧಾರದಲ್ಲಿ ಮತ ಕೇಳಿದ್ದಕ್ಕೆ ಎಫ್‌ಐಆರ್‌ ದಾಖಲಾಗಿದೆ ಎಂದು ಕರ್ನಾಟಕ ಚುನಾವಣಾ ಆಯೋಗ ಎಕ್ಸ್‌ನಲ್ಲಿ ತಿಳಿಸಿದೆ.

ಏ.25 ರಂದು ತೇಜಸ್ವಿ ಸೂರ್ಯ ಎಕ್ಸ್‌ನಲ್ಲಿ ಅಯೋಧ್ಯೆಯ ಬಾಲ ರಾಮನ ಹಣೆಗೆ ಸೂರ್ಯ ಸ್ಪರ್ಶಿಸುವ ವಿಡಿಯೋವನ್ನು ಅಪ್ಲೋಡ್‌ ಮಾಡಿ, ರಾಮ ನವಮಿಯಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಮೇಲೆ ಭವ್ಯವಾದ ಸೂರ್ಯ ತಿಲಕವನ್ನು ವೀಕ್ಷಿಸಲು ನಮ್ಮ ಪೀಳಿಗೆಯು ಆಶೀರ್ವದಿಸಲ್ಪಟ್ಟಿದೆ. ಸುಮಾರು 500 ವರ್ಷಗಳ ಕಾಯುವಿಕೆ ಮತ್ತು ಕೋಟಿಗಟ್ಟಲೆ ಭಾರತೀಯರ ಆಶಯವನ್ನು ಪ್ರಧಾನಿ ಈಡೇರಿಸಿದ್ದಾರೆ. ಭಾರತೀಯತೆ ಉಳಿಯಲು ಬಿಜೆಪಿಗೆ ಮತ ನೀಡಿ ಎಂದು ಬರೆದಿದ್ದರು.

ತೇಜಸ್ವಿ ಸೂರ್ಯ ಅವರು ಬೆಂಗಳೂಊರ ದಕ್ಷಿಣ ಕ್ಷೇತ್ರದಲ್ಲಿ ಮರು ಆಯ್ಕೆ ಬಯಸಿ ಸ್ಪರ್ಧಿಸಿದ್ದಾರೆ. ಇವರ  ವಿರುದ್ಧ ಕಾಂಗ್ರೆಸ್‌ನ ಸೌಮ್ಯಾರೆಡ್ಡಿ ಕನದಲ್ಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ